ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿಗಳ ಭೇಟಿ

Advt_NewsUnder_1
Advt_NewsUnder_1

ಬೆಳ್ತಂಗಡಿ: ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳ್ತಂಗಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಆ.30 ಮತ್ತು ಆ.31 ರಂದು ಭೇಟಿ ನೀಡಿ ಹಾನಿ ಪ್ರದೇಶಗಳನ್ನು ವೀಕ್ಷಿಸಿ, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.
ಮಾಜಿ ಮುಖ್ಯ ಮಂತ್ರಿ ವೀರಪ್ಪ ಮೊಯ್ಲಿ ಅವರು ಆ.30 ರಂದು ಮಧ್ಯಾಹ್ನ 2  ಗಂಟೆಗೆ ಬೆಳ್ತಂಗಡಿ ಪ್ರವಾಸಿ ಮಂದಿರಕ್ಕೆ ಆಗಮಿಸಲಿದ್ದಾರೆ. ಬಳಿಕ ಇತ್ತಿಚೇಗೆ ಸುರಿದ ಜಡಿಮಳೆಯ ಪ್ರವಾಹಕ್ಕೆ ನಲುಗಿ ಹೋಗಿ ಬಹಳಷ್ಟು ಹಾನಿ ಸಂಭವಿಸಿದ ಚಾರ್ಮಾಡಿ ಸೇರಿದಂತೆ ಕೆಲ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.31 ರಂದು ಬೆಳಗ್ಗೆ 10  ಗಂಟೆಗೆ ಮಂಗಳೂರಿಗೆ ಆಗಮಿಸಲಿದ್ದು, ಬಳಿಕ ಪಚ್ಚನಾಡಿ ತ್ಯಾಜ್ಯರಾಶಿಯಿಂದ ಸಮಸ್ಯೆ ಎದುರಿಸುತ್ತಿರುವ ಮಂದಾರ ಪ್ರದೇಶಕ್ಕೆ ಭೇಟಿ ನೀಡುವರು. ಬೆಳಗ್ಗೆ ಸುಮಾರು 11.30 ಕ್ಕೆ ಅವರು ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದು, ನೆರೆ ಪೀಡಿತ ಪ್ರದೇಶವಾದ ಚಾರ್ಮಾಡಿ ಮತ್ತಿತರ ಕಡೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.
ಬೂತು ಮಟ್ಟದ ಸಭೆ: ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ದ.ಕ ಕಾಂಗ್ರೆಸ್‌ನ ಬೂತ್ ಮಟ್ಟದ ಸಭೆಯನ್ನು ಅಂದು ಮಧ್ಯಾಹ್ನ 3  ಗಂಟೆಗೆ ಮಂಗಳೂರು ಪುರಭವನದಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.