HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಖ್ಯಾತ ಸಾಹಿತಿ ಅರವಿಂದ ಚೊಕ್ಕಾಡಿಯವರ ‘ಉಪನ್ಯಾಸಗಳ ಗುಚ್ಛ’ ಪುಸ್ತಕ ಬಿಡುಗಡೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇದರ ಸಾಹಿತ್ಯ ಸಂಘದ ಆಶ್ರಯದಲ್ಲಿ  ಶಿಕ್ಷಕ, ಖ್ಯಾತ ಸಾಹಿತಿ ಅರವಿಂದ ಚೊಕ್ಕಾಡಿ ಅವರ ಪುಸ್ತಕಉಪನ್ಯಾಸಗಳ ಗುಚ್ಛ ಬಿಡುಗಡೆ‘ ಕಾರ್ಯಕ್ರಮವು ಇಂದು( ಆ.30) ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಸಭಾಂಗಣದಲ್ಲಿ ಜರುಗಿತು.
ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಫಾ| ಬೇಸಿಲ್ ವಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಯೋಗೀಶ್ ಎಸ್.ಬಿ ಉಪಸ್ಥಿತರಿದ್ದರು.
ಅರವಿಂದ ಚೊಕ್ಕಾಡಿಯವರ ಹಿರಿಯ ವಿದ್ಯಾರ್ಥಿಗಳಾದ ಉದ್ಯಮಿ ಜಿನೇಶ್ ಜೈನ್ ನಲ್ಲೂರು, ಪುದುವೆಟ್ಟು ಎಸ್‌ಡಿಎಂ ಶಾಲಾ ಅಧ್ಯಾಪಕಿ ಸುಜಾತಾ ಭುವನ್, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಪ್ರಾಂಶುಪಾಲ ಪ್ರೊ. ಅಲೆಕ್ಸ್ ಐವನ್ ಸಿಕ್ವೇರ, ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಧ್ಯಾಪಕರ ಸಂಘದ ಅಧ್ಯಕ್ಷ ಡಾ. ಜೋಸೆಫ್ ಎನ್.ಎಂ, ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮುರಳೀಧರ್ ಜಿ.ಎನ್, ಸೇಕ್ರೆಡ್ ಹಾರ್ಟ್ ಕಾಲೇಜು ಸಾಹಿತ್ಯ ಸಂಘದ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.