HomePage_Banner_
HomePage_Banner_
HomePage_Banner_

ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ

Advt_NewsUnder_1

ಬೆಳ್ತಂಗಡಿ : ತಾಲೂಕು ಪಂಚಾಯತ್ ಬೆಳ್ತಂಗಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರ ಪಂಚಾಯತ್ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥ ಕಲಾಭವನದಲ್ಲಿ ಇಂದು (ಸೆ.5) ಆಚರಿಸಲಾಯಿತು.   

ಕಾರ್ಯಕ್ರಮದ ಉದ್ಘಾಟನೆಯನ್ನು  ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ನೆರವೇರಿಸಿ, ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ.ಪಂ ಸದಸ್ಯರಾದ ಕೊರಗಪ್ಪ ನಾಯ್ಕ, ಮಮತಾ ಎಂ.ಶೆಟ್ಟಿ, ಸೌಮ್ಯಲತಾ ಜಯಂತ ಗೌಡ, ಬೆಳ್ತಂಗಡಿ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್, ತಾ.ಪಂ ಸದಸ್ಯರಾದ ಪ್ರವೀಣ್ ಗೌಡ, ಕೊರಗಪ್ಪ ಗೌಡ, ಕೇಶವತಿ, ಗೋಪಿನಾಥ್ ನಾಯ್ಕ ಉಪಸ್ಥಿತರಿದ್ದರು.
ತಹಶೀಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ ಕಾರ್ಯನಿವಾಹಣಾಧಿಕಾರಿ ಕೆ.ಇ ಜಯರಾಂ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್.ಜೆ, ಕ್ಷೇತ್ರ ಶಿಕ್ಷಣಾಧಿಕಾರಿ ಸತೀಶ್.ಪಿ., ತಾರಾಕೇಸರಿ, ಲಕ್ಷ್ಮೀ ಸುವರ್ಣ ಪ್ರಭಾಕರ ನಾರಾವಿ, ಶಂಕರ್ ದೇವಾಡಿಗ ಹಾಗೂ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.