ಡಿ.ಸಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

ದ.ಕ ಜಿಲ್ಲೆಯ ದಕ್ಷ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಜಿಲ್ಲಾಧಿಕಾರಿ ಹುದ್ದೆಗೆ ಇಂದು(ಸೆ.6) ರಾಜೀನಾಮೆ ನೀಡಿದ್ದಾರೆ.

ಇವರು ತಮಿಳುನಾಡು ಮೂಲದವರಾಗಿದ್ದು, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಪದವೀಧರರಾಗಿದ್ದರು. ಇವರು ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಗಡಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ನಂತರ 2017 ಅಕ್ಟೋಬರ್‌ನಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಜಿಲ್ಲೆಯಾಧ್ಯಂತ ಸುರಿದ ಅತಿವೃಷ್ಟಿ, ಡೆಂಗ್ಯೂ, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಇವರು ತಮ್ಮ ವೈಯುಕ್ತಿಕ ಕಾರಣದಿಂದಾಗಿ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ .

ಪ್ರಿಯ ಸ್ನೇಹಿತರೇ,

ನಾನು ಇಂದು ನನ್ನ ಭಾರತೀಯ ಆಡಳಿತಾತ್ಮಕ ಸೇವೆಗೆ ರಾಜೀನಾಮೆ ಸಲ್ಲಿಸಿದ್ದೇನೆ. ನನ್ನ ರಾಜೀನಾಮೆಗೆ ವೈಯಕ್ತಿಕ ಕಾರಣಗಳಿವೆಯೇ ಹೊರತು ಯಾವುದೇ ವೈಮನಸ್ಸಿಲ್ಲ. ನನ್ನ ಸದ್ಯದ ಮಂಗಳೂರು ಡಿಸಿ ಪೋಸ್ಟ್​ಗೂ ರಾಜೀನಾಮೆಗೂ ಸಂಬಂಧವಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನ ಮತ್ತು ಅಧಿಕಾರಿಗಳಿಗೆ ನಾನು ಈ ಸಂದರ್ಭದಲ್ಲಿ ಕ್ಷಮೆ ಕೋರಲು ಇಚ್ಚಿಸುತ್ತೇನೆ. ಅವರ ಜತೆ ಕೆಲಸ ಮಾಡಿದ್ದು ಅವಿಸ್ಮರಣೀಯ. ಅರ್ಧದಲ್ಲೇ ರಾಜೀನಾಮೆ ನೀಡಿ ಹೋಗುತ್ತಿರುವುದಕ್ಕೆ ಅವರಲ್ಲಿ ಕ್ಷಮೆ ಯಾಚಿಸುತ್ತೇನೆ.

ದೇಶದ ಸಂವಿಧಾನದ ಮೂಲ ಆಶಯಗಳು ಹಾದಿ ತಪ್ಪುತ್ತಿರುವ ಈ ದಿನಗಳಲ್ಲಿ ನಾನು ಭಾರತೀಯ ಆಡಳಿತಾತ್ಮಕ ಸೇವೆಯಲ್ಲಿ ಮುಂದುವರೆಯುವುದು ನನಗೆ ಸಮಂಜಸವೆನಿಸುತ್ತಿಲ್ಲ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ನಮ್ಮ ಪ್ರಜಾಪ್ರಭುತ್ವದ ತಳಹದಿ ಕುಸಿಯುತ್ತಿರುವಾಗ ನೈತಿಕವಾಗಿ ನನಗೆ ಈ ವೃತ್ತಿಯಲ್ಲಿ ಇರಲು ಇಷ್ಟವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಈ ವಿಷಮಯ ಸ್ಥಿತಿ ಇನ್ನಷ್ಟು ಉಲ್ಬಣವಾಗಲಿದೆ. ನಾನು ಐಎಎಸ್​ ವೃತ್ತಿಯ ಆಚೆಗಿದ್ದರೆ ದೇಶದ ಅಭಿವೃದ್ಧಿಗಾಗಿ, ಜನರಿಗಾಗಿ ಇನ್ನಷ್ಟು ಹೆಚ್ಚು ಕೆಲಸ ಮಾಡಬಹುದು. ಎಲ್ಲಾ ಅದರಪಾಡಿಗೆ ಆಗಲಿ ಎಂದು ಸುಮ್ಮನಾಗಲು ಇನ್ನು ಸಾಧ್ಯವಿಲ್ಲ.

ಇನ್ನೊಮ್ಮೆ ನನ್ನ ಜತೆ ಕೆಲಸ ಮಾಡಿದ ಎಲ್ಲರಿಗೂ, ರಾಜ್ಯದ ಜನರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ನನ್ನ ಸಹೋದ್ಯೋಗಿಗಳು ಮತ್ತು ಅವರ ಕುಟುಂಬಸ್ಥರು ಸಂತಸದಿಂದಿರಲಿ ಎಂದು ಆಶಯಿಸುತ್ತೇನೆ.             

 

ಎಸ್​. ಸಸಿಕಾಂತ್​ ಸೆಂತಿಲ್

 

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.