ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಗುರು ಜಯಂತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಶ್ರೀ.ಗು.ನಾ.ಸ್ವಾ.ಸೇ ಸಂಘ, ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಗುರು ಜಯಂತಿ ಹಾಗೂ ವಿದ್ಯಾರ್ಥಿ ವೇತನ, ಬ್ರಹ್ಮಶ್ರೀ ಗೌರವ ಪುರಸ್ಕಾರ, ಪ್ರತಿಭಾ ಪುರಸ್ಕಾರ, ಸಾಧಕರಿಗೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ತಾಲೂಕಿನ ನೆರೆ ಸಂತ್ರಸ್ತರಿಗೆ ಸಾಂತ್ವಾನ ನಿಧಿ ಸಮರ್ಪಣೆ ಕಾರ್ಯಕ್ರಮವು ಸೆ.13 ರಂದು ಬೆಳ್ತಂಗಡಿ ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಜರುಗಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ, ಬೆಳ್ತಂಗಡಿ ಶ್ರೀ.ಗು.ನಾ.ಸ್ವಾ.ಸೇ.ಸಂಘದ ಗೌರವಾಧ್ಯಕ್ಷ ಕೆ.ವಸಂತ ಬಂಗೇರ ನೆರವೇರಿಸಿದರು. ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶ್ರೀ.ಗು.ನಾ.ಸ್ವಾ.ಸೇ.ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಬೆಳ್ತಂಗಡಿ ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಪುತ್ತೂರು ಸಹಾಯಕ ಕಮಿಷನರ್ ಕೃಷ್ಣಮೂರ್ತಿ ಹೆಚ್.ಕೆ.ಎ.ಎಸ್, ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ರವರ ವಿಶೇಷ ಕರ್ತವ್ಯ ಅಧಿಕಾರಿ ಜಗನ್ನಾಥ ಬಂಗೇರ, ಭಾಗವಹಿಸಿದ್ದರು.


ಬೆಳ್ತಂಗಡಿ ಶ್ರೀ.ಗು.ನಾ.ಸ್ವಾ.ಸೇ.ಸಂಘದ ಮಾಜಿ ಅಧ್ಯಕ್ಷರುಗಳು, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಸಂತೋಷ್ ಕುಮಾರ್ ಉಪ್ಪಾರು, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್ ಮೊದಲಾದವರು ಗೌರವ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.