HomePage_Banner_
HomePage_Banner_
HomePage_Banner_

ಶೀಘ್ರದಲ್ಲಿ ಪೆಟ್ರೋಲ್- ಡಿಸೇಲ್ ದರ ಏರಿಕೆ ಸಂಭವ

ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದ್ದು ಎಲ್ಲಾ ಕಡೆಗಳಲ್ಲಿ ಉದ್ಯಮಗಳು ಕುಂಠುತ್ತಿವೆ. ಈ ಸಂದರ್ಭದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.  ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 5-6 ರೂ. ಏರಿಕೆಯಾಗುವ ಸಾಧ್ಯತೆ ಇದೆ.
ವಿಶ್ವದ ಪ್ರಮುಖ ತೈಲ ಉತ್ಪಾದಕ ರಾಷ್ಟ್ರವಾದ ಸೌದಿ ಅರೇಬಿಯಾದಲ್ಲಿ ತೈಲ ಘಟಕಗಳ ಮೇಲೆ ಡ್ರೋನ್ ದಾಳಿ ನಡೆದ ಪರಿಣಾಮ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಮುಂದಿನ 15  ದಿನಗಳಲ್ಲಿ ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ   ಏರಿಕೆಯಾಗುವ ಸಾಧ್ಯತೆ ಇದೆ.
ಸೌದಿ ಅರೇಬಿಯಾದಿಂದ ಭಾರತ ಸೇರಿದಂತೆ ತೈಲ ಪೂರೈಕೆಯಾಗುವ ರಾಷ್ಟ್ರಗಳಿಗೆ ತೈಲ ಸರಬರಾಜು ಪೂರ್ಣ ಪ್ರಮಾಣದಲ್ಲಿ ಆಗುತ್ತಿಲ್ಲ. ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಈ ಕಾರಣದಿಂದ ಮಾರುಕಟ್ಟೆಯಲ್ಲಿ ತೈಲದ ಬೆಲೆ  ಏರಿಕೆಯಾಗಬಹುದು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.