ಧರ್ಮಸ್ಥಳ: ಭಜನಾ ತರಬೇತಿ ಶಿಬಿರ ಸಮಾರೋಪ ಸಮಾರಂಭ

ಧರ್ಮಸ್ಥಳ : ಒಂದು ವಾರ ನಡೆದ ಇಪ್ಪತ್ತೊಂದನೆ ವರ್ಷದ ಭಜನಾ ತರಬೇತಿ ಶಿಬಿರ ಮತ್ತು ಸಂಸ್ಕೃತಿ ಸಂವರ್ಧನಾ ಶಿಬಿರದ ಸಮಾರೋಪ ಸಮಾರಂಭವು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸೆ.22 ರಂದು ಜರುಗಿತು.   

ಹರಿಹರಪುರದ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದ  ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ವಹಿಸಿದ್ದರು.   

ಅತಿಥಿಗಳಾಗಿ ಹೇಮಾವತಿ ವಿ. ಹೆಗ್ಗಡೆ, ಹಿರೇಮಗಳೂರು ಕಣ್ಣನ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ, ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.

ಭಜನಾ ತರಬೇತಿ ಶಿಬಿರದ ಕಾರ್ಯದರ್ಶಿ ಮಮತಾ ರಾವ್ ವರದಿ ವಾಚಿಸಿದರು. ಶ್ರೀನಿವಾಸ ರಾವ್ ಕಾರ್ಯಕ್ರಮ ನಿರ್ವಹಿಸಿ, ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿಬಿ. ಜಯರಾಮ ನೆಲ್ಲಿತ್ತಾಯ ಧನ್ಯವಾದವಿತ್ತರು.

 

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.