HomePage_Banner_
HomePage_Banner_
HomePage_Banner_

ಬೆಳಾಲು : ಕೃಷಿಪತ್ತಿನ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನಾ ಸಮಾರಂಭ

Advt_NewsUnder_1

ಬೆಳಾಲು: ಬೆಳಾಲು ಕೃಷಿಪತ್ತಿನ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡದ ಉದ್ಘಾಟನೆಯು ಸೆ.22ರಂದು ಬೆಳಾಲು ಎಸ್‌ಡಿಎಂ ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದ ಉದ್ಘಾಟನೆಯನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್ ರಾಜೆಂದ್ರ ಕುಮಾರ್ ನೆರವೇರಿಸಿದರು.  ಅಧ್ಯಕ್ಷತೆಯನ್ನು ಬೆಳಾಲು ಗ್ರಾ.ಪಂ ಅಧ್ಯಕ್ಷ ದಿನೇಶ್ ಕೋಟ್ಯಾನ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜಾ, ವಿಧಾನಪರಿಷತ್ ಶಾಸಕ ಹರೀಶ್ ಕುಮಾರ್ ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ ಭಿಡೆ, ಸಹಕಾರಿ ಅಭಿವೃದ್ಧಿ ಅಧಿಕಾರಿ ಸುಕನ್ಯಾ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ರಂಜನ ಬಾವಂತಬೆಟ್ಟು, ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಇಚ್ಚಿಲ ಸುಂದರ ಗೌq ಉಪಸ್ಥಿತರಿದ್ದರು.
ಚಿತ್ತಾರ, ವೈಷ್ಣವಿ ಮತ್ತು ಶ್ರೇಯಾ ಪ್ರಾರ್ಥನೆ ಹಾಡಿದರು,ಧರ್ಮೇಂದ್ರ ಮತ್ತು ಮಹೇಶ್ ಕಾರ್ಯಕ್ರಮ ನಿರೂಪಿಸಿ ಸಿರ್ವಜಕ ಸನ್ಮಾನ ಸಮಿತಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಚೊಕ್ಕಾಡಿ ಸ್ವಾಗತಿಸಿ,ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ. ಎ ವಂದಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.