ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಖಂಡಿಸಿ ಎಸ್.ಡಿ.ಪಿ.ಐ ನಿಂದ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಕೇಂದ್ರ ಹಾಗೂ ರಾಜ್ಯ ಸರಕಾರ ಜಾರಿಗೊಳಿಸಿದ  ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮತ್ತು ರಾಷ್ತ್ರೀಯ ಹೆದ್ದಾರಿಗಳ ದುರಾವಸ್ಥೆಯನ್ನು ಖಂಡಿಸಿ ಸೋಶಿಯಲ್ ಡೆಮಾರ್ಟಿಕ್ ಪಾರ್ಟಿ ಆಫ್  ಇಂಡಿಯಾ(ಎಸ್ ಡಿಪಿಐ) ಇದರ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು   ಬೃಹತ್ ಪ್ರತಿಭಟನೆ  ಇಂದು (ಸೆ27)  ನಡೆಯಿತು.

 

ಕೇಂದ್ರ ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ರದ್ದುಗೊಳಿಸಿ, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಕಟ್ಟು ನಿಟ್ಟಿನ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.

ಈ ಅವೈಜ್ಞಾನಿಕ ಮತ್ತು ಜನ ವಿರೋಧಿ ಕಾಯ್ದೆಯಿಂದ ಜನ ಸಾಮಾನ್ಯರಿಗೆ ಆರ್ಥಿಕ ಹೊಡೆತ ಬೀಳುತ್ತಿದ್ದು, ಎಷ್ಟೋ ಮಂದಿ ದಂಡ ಕಟ್ಟಲಾಗದೆ ತಮ್ಮ ವಾಹನವನ್ನೇ ಪೊಲೀಸರ ಕೈಗೆ ಒಪ್ಪಿಸಿ ಹೋಗಿರುವ ನಿದರ್ಶನ ಕಂಡು ಬಂದಿದ್ದು ರಾಜ್ಯದಲ್ಲಿ ಈ ನೂತನ ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಬಾರದೆಂದು, ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳು ಸಂಪೂರ್ಣವಾಗಿ ಹದೆಗೆಟ್ಟಿದ್ದು ಕೂಡಲೇ ದುರಸ್ತಿಗೊಳಿಸಿ ರಸ್ತೆಗಳನ್ನು ಉನ್ನತೀಕರಿಸಬೇಕೆಂದು ಮತ್ತು ದ.ಕ ಜಿಲ್ಲೆಯಲ್ಲಿ ಪ್ರವಾಹದಿಂದ ಸಂಕಷ್ಟಗಳನ್ನು ಅನುಭವಿಸುತ್ತಿರುವ ಕುಟುಂಬಗಳಿಗೆ ಕೂಡಲೇ ಪರಿಹಾರವನ್ನು ಒದಗಿಸುವಂತೆ   ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಜಿಲ್ಲಾ ಉಪಾಧ್ಯಕ್ಷ ಪಿ.ಡಿ. ಅಂತೋನಿ, ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಬೆಳ್ತಂಗಡಿ ಎಸ್.ಡಿ.ಪಿ.ಐ ಅಧ್ಯಕ್ಷ ನವಾಝ್ ಶರೀಫ್, ಜಿಲ್ಲಾ ಸಮಿತಿ ಸದಸ್ಯ ಅಕ್ಬರ್ ಬೆಳ್ತಂಗಡಿ, ತಾ| ಎಸ್.ಡಿ.ಪಿ.ಐ ಉಪಾಧ್ಯಕ್ಷ ಶಕುರ್ ಕುಪೆಟ್ಟಿ ಹಾಗೂ ಎಸ್.ಡಿ.ಪಿ.ಐ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಸಿದ್ದರು.

 

 

 

 

 

 

 

 

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.