ಕರಂಬಾರು : ಮಲಾರುಬೀಡು ಕೃಷ್ಣ ಸಾಮಾನಿ ನಿಧನ

ಶಿರ್ಲಾಲು: ಕರಂಬಾರು ನಿವಾಸಿ ಮಲಾರು ಬೀಡು ಕೃಷ್ಣ ಸಾಮಾನಿ (80.ವ) ಇವರು ಅ.04 ರಂದು ರಾತ್ರಿ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪ್ರಗತಿಪರ ಕೃಷಿಕರಾಗಿದ್ದ ಇವರು ಶಿರ್ಲಾಲು ಗ್ರಾ.ಪಂ.ನ ಉಪಾಧ್ಯಕ್ಷರಾಗಿ, ಶಿರ್ಲಾಲು ಬಿಜೆಪಿ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಗೌರವ ಸಲಹೆಗಾರರಾಗಿ, ಬೊಟ್ಯಾಲುಮಾರು ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ವನಜಾ ಕೆ ಸಾಮಾನಿ, ಐವರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು  ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.