ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಭಿವೃದ್ಧಿ ಬಗ್ಗೆ ವಿಶೇಷ ಕಾರ್ಯಾಗಾರ

Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ: ತಾಲೂಕು ಪಂಚಾಯತ್ ನೇತೃತ್ವದಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಭಿವೃದ್ಧಿ ಬಗ್ಗೆ ಅರಣ್ಯ ಹಕ್ಕು ಕಾಯಿದೆ ಹಾಗೂ ಆನ್ಲೈನ್ ಅರ್ಜಿ ಬಗ್ಗೆ ವಿಶೇಷ ಕಾರ್ಯಾಗಾರ ತಾಲೂಕು ಪಂಚಾಯತ್ ಕಾರ್ಯಾನಿರ್ವಹಣಾಧಿಕಾರಿ ಕೆ.ಇ ಜಯರಾಂ ಅವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿ ಎಸ್.ಎನ್ ನಾಯಕ್ ಅವರು ಕಾರ್ಯಾಗಾರ ನಡೆಸಿದರು.

ಕಾರ್ಯಾಗಾರದ ಬಳಿಕ ಅಧಿಕಾರಿಗಳ , ಸಂಘಟನೆ ಪ್ರಮುಖರ ಸಭೆ ನಡೆಸಿದ ತಾಲೂಕು ಪಂಚಾಯತ್ ಕಾರ್ಯಾನಿರ್ವಹಣಾಧಿಕಾರಿ ಕೆ.ಇ ಜಯರಾಂ ಅವರು ” ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಭಿವೃದ್ಧಿಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ. ಕಾಲಮಿತಿಯೊಳಗೆ ಅಭಿವೃದ್ಧಿ ಕಾರ್ಯಕ್ರಮದ ವರದಿಯನ್ನು ಸಲ್ಲಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ಯಾವ ಅಧಿಕಾರಿಗಳಿಗೂ ಕ್ಷಮೆ ಇಲ್ಲ ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ತಾ.ಪಂ ಸದಸ್ಯ ಸುಧೀರ್ ಕುಮಾರ್ ಸುವರ್ಣ , ಮೆಸ್ಕಾಂ ಎಇಇ ಶಿವಶಂಕರ್ , ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗದ ಎಇಇ ಚೆನ್ನಪ್ಪ ಮೊಯಿಲಿ , ಸಮಾಜ ಕಲ್ಯಾಣ ಇಲಾಖೆಯ ವಾರಿಜ , ಗಿರಿಜನ ಅಭಿವೃದ್ಧಿ ಉಪ ಯೋಜನೆಯ ಮೇಲ್ವಿಚಾರಕಿ ಹೇಮಾಲತಾ , ವನ್ಯಜೀವಿ ಅರಣ್ಯ ಇಲಾಖೆಯ ಪ್ರದೀಪ್ , ತಾ.ಪಂಚಾಯತ್ ನ ಶ್ರೀಧರ್ ಹೆಗ್ಡೆ , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ, ಸಂಚಾಲಕ ಶೇಖರ್ ಎಲ್ , ಮಲೆಕುಡಿಯ ಸಂಘದ ಕಾರ್ಯದರ್ಶಿ ಹರೀಶ್ ಉಪಸ್ಥಿತರಿದ್ದರು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ತಾ.ಪಂ ಸಂಯೋಜಕ ಜಯಾನಂದ ಲಾಯಿಲ ಸ್ವಾಗತಿಸಿ , ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.