ಶ್ರೀ ವನದುರ್ಗಾ ದೇವಾಲಯ ಮಲೆಬೆಟ್ಟು: ಬ್ರಹ್ಮಕಲಶೋತ್ಸವ ಸಮಿತಿ ವಿಶೇಷ ಸಭೆ

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಬದಿನಡೆ ಶ್ರೀ ವನದುರ್ಗಾ ದೇವಾಲಯದ ಜೀರ್ಣೋದ್ಧಾರದ ಕಾಮಗಾರಿಗಳು ಬರದಿಂದ ಸಾಗಿ, ಬ್ರಹ್ಮಕಲಶೋತ್ಸವದ ತಯಾರಿಯಲ್ಲಿದೆ. ಅ.6ರಂದು ಶ್ರೀ ಕ್ಷೇತ್ರದಲ್ಲಿ ವಿಶೇಷ ಸಭೆಯು ದೇವಸ್ಥಾನದ ಅಧ್ಯಕ್ಷ ಕಾಂತಾಜೆ ಈಶ್ವರ ಭಟ್‌ರವರ ಮಾರ್ಗದರ್ಶನದಲ್ಲಿ ನಡೆಯಿತು.
ಸಭೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸುವ ಬಗ್ಗೆ ಚರ್ಚಿಸಲಾಯಿತು. ಬ್ರಹ್ಮಕಲಶೋತ್ಸವವು 2020ರ ಫೆ.4ರಿಂದ 17ರವರೆಗೆ ಜಾತ್ರಾ ಮಹೋತ್ಸವವು ಸೇರಿ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಹಾಗೂ ಕ್ಷೇತ್ರದ ಅರ್ಚಕ ವೇ.ಮೂ| ಅಶೋಕ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ನಿರ್ದೇಶಕ ಬಾಲಕೃಷ್ಣ ಪೂಜಾರಿ ಇವರು ಬ್ರಹ್ಮಕಲಶೋತ್ಸವ ಸಮಿತಿಗಳ ಬಗ್ಗೆ ಉತ್ತಮ ಮಾಹಿತಿ, ಸಲಹೆ, ಜವಾಬ್ಧಾರಿ ಬಗ್ಗೆ ವಿವರಿಸಿದರು ಹಾಗೂ ವಿವಿಧ ಸಮಿತಿಗಳನ್ನು ರಚಿಸಲಾಯಿತು.
ಕುವೆಟ್ಟು ಕ್ಷೇತ್ರದ ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ಕೆಂಬರ್ಜೆ ಸೀತಾರಾಮ ಶೆಟ್ಟಿ ಕೊಯ್ಯೂರು, ಗ್ರಾ.ಪಂ ಅಧ್ಯಕ್ಷೆ ಶಶಿಕಲಾ, ದೇವಸ್ಥಾನದ ಆಡಳಿತ ಸಮಿತಿಯ ಕೋಶಾಧಿಕಾರಿ ಕಾಂತಾಜೆ ಶ್ರೀಗಣೇಶ್, ದೇವಸ್ಥಾನದ ಅರ್ಚಕ ಗೋಪಾಲ ಉಡುಪ ಹಾಗೂ ಆಡಳಿತ ಸಮಿತಿ ಸದಸ್ಯರು, ಗ್ರಾಮಸ್ಥರು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಮೋಹನ್ ಕಾರ್ಯಕ್ರಮ ನಿರೂಪಿಸಿ, ಪೆರ್ಮುದೆ ರವಿಂದ್ರನಾಥ ಗೌಡ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.