ಪ್ರತಿಭಾವಂತರು ಸಂಸ್ಕೃತಿ, ಸಂಸ್ಕಾರ ಉಳಿಸುವುದರೊಂದಿಗೆ ಸಮಾಜದ ಸಂಘಟನೆಗೆ ಸಹಕರಿಸಬೇಕು:ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ

 

ಉಜಿರೆ: ಪ್ರತಿಭಾವಂತರಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನ ದೊರಕುತ್ತದೆ. ಅವರು ಸಂಸ್ಕೃತಿ, ಸಂಸ್ಕಾರ ಉಳಿಸುವುದರೊಂದಿಗೆ ಸಮಾಜದ ಸಂಘಟನೆ ಮತ್ತು ಬಲವರ್ಧನೆಗೆ ಸಹಕರಿಸಬೇಕು ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಅವರು ಭಾನುವಾರ ಉಜಿರೆಯಲ್ಲಿ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ದೇವರಿಗೆ ಲಕ್ಷ ತುಳಸಿ ಅರ್ಚನೆ ಬಳಿಕ ಬೆಳ್ತಂಗಡಿ ತಾಲ್ಲೂಕು ತುಳು ಶಿವಳ್ಳಿ ಸಭಾದ ಆಶ್ರಯದಲ್ಲಿ ಪ್ರತಿಭಾವಂತರನ್ನು ಸನ್ಮಾನಿಸಿ ಆಶೀರ್ವದಿಸಿದರು.


ಪ್ರತಿಭಾವಂತ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಿ ಉನ್ನತ ಸ್ಥಾನ ಪಡೆಯಬೇಕು. ನಮ್ಮ ಸನಾತನ ಪರಂಪರೆ, ಸಂಸ್ಕಾರ, ಆಚಾರ-ವಿಚಾರಗಳನ್ನು ಕಡೆಗಣಿಸಬಾರದು. ಕ್ರೀಡಾ ಕ್ಷೇತ್ರದಲ್ಲಿಯೂ ಹೆಚ್ಚಿನ ಸಾಧನೆ ಮಾಡಬೇಕೆಂದು ಸ್ವಾಮೀಜಿ ಸಲಹೆ ನೀಡಿದರು.


ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ ಋತ್ವಿಕ್ ಅಲೆವೂರಾಯ ಮತ್ತು ಚೆಸ್ ಚಾಂಪಿಯನ್ ಈಶಾ ಶರ್ಮಾ ಅವರನ್ನು ಗೌರವಿಸಲಾಯಿತು. ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ, ಗಾಯತ್ರಿ ಶ್ರೀಧರ್ ಮತ್ತು ಡಾ. ಎಂ.ಎಂ. ದಯಾಕರ ಉಪಸ್ಥಿತರಿದ್ದರು. ಶರತ್ ಕೃಷ್ಣಪಡ್ವೆಟ್ನಾಯ ಸ್ವಾಗತಿಸಿದರು. ಮುರಳಿಕೃಷ್ಣ ಆಚಾರ್ಯ  ಕಾರ್ಯಕ್ರಮ ನಿರ್ವಹಿಸಿದರು. ಶ್ರೀಧರ ಕೆ.ವಿ. ಧನ್ಯವಾದವಿತ್ತರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.