ಅಕಾಡೆಮಿಗಳಿಗೆ ತಾಲೂಕಿನ ಮೂರು ಮಂದಿ ನೇಮಕ

ಬೆಳ್ತಂಗಡಿ: ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರುಗಳನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಬೆಳ್ತಂಗಡಿ ತಾಲೂಕಿನ ಮೂರು ಮಂದಿ ಮೂರು ಪ್ರತ್ಯೇಕ ಅಕಾಡೆಮಿಗಳಲ್ಲಿ ಸ್ಥಾನ ಪಡೆದಿದ್ದಾರೆ.
ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಬೆಳ್ತಂಗಡಿ ತಾಲೂಕು ಶಿರ್ಲಾಲು ನಿವಾಸಿ, ಪ್ರಸ್ತುತ ಪುತ್ತೂರು ಶ್ರೀ ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಡಾ. ರೋಹಿಣಾಕ್ಷ ಶಿರ್ಲಾಲು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ತಾಲೂಕಿನ ಬಳೆಂಜ ನಿವಾಸಿ, ಟೀಚರ್‍ಸ್ ಕೋ ಆಪರೇಟಿವ್ ಬ್ಯಾಂಕ್ ನೌಕರ ರವೀಂದ್ರ ಶೆಟ್ಟಿ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಪ್ರಸ್ತುತ ತುಮಕೂರು ವಿದ್ಯಾನಿಧಿ ಕಾಲೇಜಿನಲ್ಲಿ ಆಂಗ್ಲಭಾಷಾ ಉಪನ್ಯಾಸಕಿಯಾಗಿರುವ ಆರತಿ ಪಟ್ರಮೆ ನೇಮಕಗೊಂಡಿದ್ದಾರೆ. ರಾಜ್ಯ ಸರಕಾರ ಅ.೧೫ರಂದು ಬಿಡುಗಡೆಗೊಳಿಸಿದ ಪಟ್ಟಿಯಲ್ಲಿ ರಾಜ್ಯದ ಒಟ್ಟು16ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.