ತಾರಾಲೋಕ ಖಗೋಳಶಾಸ್ತ್ರ ಕಾರ್ಯಾಗಾರ ಉದ್ಘಾಟನೆ

ಉಜಿರೆ: ಭೌತಶಾಸ್ತ್ರ ವಿಭಾಗ ಹಾಗೂ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಮಂಗಳೂರು, ಮಂಗಳೂರು ವಿಶ್ವವಿದ್ಯಾಲಯ ಭೌತಶಾಸ್ತ್ರ ಅಧ್ಯಾಪಕರ ಸಂಘ ಮತ್ತು ರಸಾಯನ ಶಾಸ್ತ್ರ ಮತ್ತು ಗಣಿತ ಶಾಸ್ತ್ರ ವಿಭಾಗ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಖಗೋಳಶಾಸ್ತ್ರ ಕಾರ್ಯಾಗಾರ ತಾರಾಲೋಕ ಇದರ ಉದ್ಘಾಟನಾ ಸಮಾರಂಭವು ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನ ರತ್ನತ್ರಯ ಸಭಾಭವನದಲ್ಲಿ ಜರುಗಿತು.
ಉಜಿರೆ ಶ್ರೀ ಧ.ಮಂ. ಪ.ಪೂ.ಕಾಲೇಜು ಪ್ರಾಂಶುಪಾಲ ಪ್ರೊ. ದಿನೇಶ್ ಚೌಟ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಗಳೂರು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಕೆ.ವಿ.ರಾವ್, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಸತೀಶ್ ಪಿ, ಎಸ್.ಡಿ.ಎಂ ಕಾಲೇಜಿನ ನಿವೃತ್ತ ಪಾಂಶುಪಾಲ ಕೇಶವ, ಸಂಪನ್ಮೂಲ ವ್ಯಕ್ತಿ ಕೆ ಬಿ.ರಾಧಾಕೃಷ್ಣ, ಉಜಿರೆ ಶ್ರೀ ಧ.ಮಂ. ಕಾಲೇಜು ಪ್ರಾಚಾರ್ಯ ಪ್ರೊ. ಸತೀಶ್ಚಂದ್ರ ಉಪಸ್ಥಿತರಿದ್ದರು.
ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ವಿಶ್ವನಾಥ್.ಪಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಸ್.ಎನ್ ಕಾಕತ್ಕರ್, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಗಣೇಶ್ ನಾಯಕ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.