ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಜಾಗತಿಕ ಮಟ್ಟದಲ್ಲಿ ಅನುಷ್ಠಾನಕ್ಕಾಗಿ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಂತರ್ರಾಷ್ಟ್ರೀಯ ಸಮ್ಮೇಳನ ಅ.೩೦ರಂದು ಬೆಂಗಳೂರಿನಲ್ಲಿ ಕ್ಲಾರ್ಕ್ಸ್ ಎಕ್ಸಾಟಿಕಾ ರೆಸಾರ್ಟ್ ಆಂಡ್ ಸ್ಪಾ ದೇವನಹಳ್ಳಿಯಲ್ಲಿ ಉದ್ಘಾಟನೆಗೊಂಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಜಾಗತಿಕ ಮಟ್ಟದಲ್ಲಿ ಅನುಷ್ಠಾನಗೊಳಿಸುವ ಉದ್ದೇಶದಿಂದ ನಡೆಯುತ್ತಿರುವ ಅಂತರ್ರಾಷ್ಟೀಯ ಸಮ್ಮೇಳವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್ ಅವರು ಉದ್ಘಾಟಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಆಗಿರುವ ಜನಪರ, ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.ಸಾಮಾಜಿಕ ಮತ್ತು ಆಧ್ಯಾತ್ಮಿಕ ನಾಯಕರು ಆರ್ಥಿಕ ಬದಲಾವಣೆ ತರುವ ನೇತೃತ್ವ ವಹಿಸುತ್ತಿದ್ದಾರೆ.ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆ ಅವರೇ ಸಾಕ್ಷಿ ಎಂದು ಹೊಗಳಿದ ನಿರ್ಮಲಾಸೀತಾರಾಮನ್ ಅವರು,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಂತಹ ಸಾಮಾಜಿಕ ಸಂಸ್ಥೆಗಳನ್ನು ಬ್ಯಾಂಕ್‌ಗಳು ಗುರುತಿಸಿ ಸಾಲ ನೀಡುವಂತಾಗಬೇಕು ಎಂದರಲ್ಲದೆ, ಇಂತಹ ಸಂಸ್ಥೆಗಳಿಂದ ಬ್ಯಾಂಕುಗಳಿಗೆ ಸಾಲ ಮರುಪಾವತಿ ಸೂಕ್ತವಾಗಿ ನಡೆಯುತ್ತದೆ ಎಂದರು.ವಸ್ತು ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ ಮತ್ತು ಯೋಜನೆಯನ್ನು ಪ್ರಾಯೋಜಿಸಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರ ನಾಯಕತ್ವದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು.ನಬಾರ್ಡ್ ಸಂಸ್ಥೆ ಅಧ್ಯಕ್ಷ ಡಾ|ಹರ್ಷ ಕುಮಾರ್ ಭಾನ್ವಾಲರವರು ಯೋಜನೆಯ ಸಾಧನಾ ಪುಸ್ತಕ ಬಿಡುಗಡೆ ಮಾಡಿದರು.ಅಮೇರಿಕಾದ ಚಿಕಾಗೋ ನಗರದ ಪ್ರೊಫೆಸ್ಸರ್ ಲ್ಯಾರಿಡೀಡ್ ಪ್ರಧಾನ ಭಾಷಣ ಮಾಡಿದರು.ಹೇಮಾವತಿ ವಿ.ಹೆಗ್ಗಡೆ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.
ಅ.31, ನ.1ರಂದು ನಡೆಯಲಿರುವ ಸಮ್ಮೇಳನದಲ್ಲಿ ಏಳು ಪ್ರಮುಖ ಚರ್ಚಾಗೋಷ್ಠಿಗಳು ನಡೆಯಲಿವೆ.ನ.೧ರಂದು ಸಮಾರೋಪ ಸಮಾರಂಭ ನಡೆಯಲಿದೆ.1982ರಿಂದ ಕಾರ್ಯನಿರ್ವಹಿಸುತ್ತಿರುವ, ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆಯವರಿಂದ ಪ್ರಾಯೋಜಿಸಲ್ಪಟ್ಟಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘ ಚಳುವಳಿಯಿಂದ ಸುಸ್ಥಿರ ಗುರಿಗಳನ್ನು ಅನುಷ್ಠಾನಿಸಲು ಸಾಧ್ಯವಿದೆ ಎಂದು ತೋರಿಸಿಕೊಟ್ಟಿದ್ದಾರೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಸಹಯೋಗ ಸಂಸ್ಥೆಗಳು ಸೇರಿಕೊಂಡು ಬಡತನ ನಿವಾರಣೆ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ತೊಡಗಿಕೊಂಡಿರುವ ರಾಷ್ಟ್ರೀಯ ಮತ್ತು ಅಂತರ್ರಾಷ್ಟ್ರೀಯ ಸಂಸ್ಥೆಗಳ ಜೊತೆಯಲ್ಲಿ ಚರ್ಚಿಸಲು ಮೂರು ದಿನಗಳ ಅಂತರ್ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.