HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಎಸ್‌ಕೆಆರ್‌ಡಿಪಿ ಅಂತಾರಾಷ್ಟ್ರೀಯ ಸಮಾವೇಶದ ಸಮಾರೋಪ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ಅಂತಾರಾಷ್ಟ್ರೀಯ ಸಮಾವೇಶವು ಅ.30ರಿಂದ ನ.1 ರವರೆಗೆ ಬೆಂಗಳೂರಿನ ದೇವನಹಳ್ಳಿ ಕ್ಲಾಕ್ಸ್ ಎಕ್ಸಾಟಿಕ ರೆಸಾರ್ಟ್‌ನಲ್ಲಿ ಜರುಗಿದ್ದು, ಇದರ ಸಮಾರೋಪ ಸಮಾರಂಭವು ನ.1 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡರವರು ಗ್ರಾಮಾಭಿವೃದ್ಧಿ ಯೋಜನೆಯ ಕಿರುಪರಿಚಯ ಅನಾವರಣಗೊಳಿಸಿ ಮಾತನಾಡಿ, ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಮಹಿಳಾ ಸಶಕ್ತೀಕರಣಕ್ಕೆ ಅನುಕೂಲವಾಗಿದೆ. ಶ್ರೀ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವಸಹಾಯ ಸಂಘಗಳ ಮೂಲಕ ಸಾಲ ಸೌಲಭ್ಯ ನೀಡುವುದರ ಮೂಲಕ ಆರ್ಥಿಕ ಸುಧಾರಣೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದರು.


ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಸಹಾಯ ಸಂಘ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ವೈಖರಿಯ ಬಗ್ಗೆ ಮಾಹಿತಿ ನೀಡಿ, ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲಾ ಪ್ರಾಯೋಜಕರಿಗೆ ಅಭಿನಂದನೆ ಸಲ್ಲಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಬ್ಯಾಂಕರ್‍ಸ್ ವತಿಯಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ, ಹೊಸದಿಲ್ಲಿಯ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಅಮರ್‌ಜಿತ್ ಸಿನ್ಹಾ, ತಾಂಜೀನಿಯಾ ದೇಶದ ಮರಿಯಾ, ಸ್ವಸಹಾಯ ಸಂಘದ ಸ್ಥಾಪಕ ಮೈಸೂರು ಮೈರಾಡದ ಫೆರ್ನಾಂಡಿಸ್, ಮೈಕ್ರೋ ಫೈನಾನ್ಸ್ ನ ರೀಜಿನಲ್ ಡೈರೆಕ್ಟರ್ ಡಿ.ಎಸ್.ಕೆ ರಾವ್ ಸೆಲ್ಕೋ ಪೌಂಡೇಷನ್ ನಿರ್ದೇಶಕ ಡಾ| ಹರೀಶ್ ಹಂದೆ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಹೆಚ್ ಮಂಜುನಾಥ್ ವಂದನಾರ್ಪಣೆಗೈದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.