ಯೋಗೀಶ್ ಕೈರೋಡಿಯವರಿಗೆ ಧರ್ಮಪಾಲನಾಥ ಸ್ವಾಮೀಜಿಯವರಿಂದ ಸನ್ಮಾನ

ಬೆಳ್ತಂಗಡಿ: ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಯೋಗೀಶ್ ಕೈರೋಡಿಯವರನ್ನು ಕಾವೂರು ಬಾಲಗಂಗಾಧರನಾಥ ಸ್ವಾಮಿ ಶಿಕ್ಷಣ ಸಂಸ್ಥೆಯಲ್ಲಿ ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಸನ್ಮಾನಿಸಿದರು.
ಡಾ| ಯೋಗೀಶ್ ಕೈರೋಡಿಯವರು ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ನ.1 ರಂದು ನಡೆದ ೬೪ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜಿಎಸ್ ಕಾಲೇಜಿನ ಪ್ರಾಂಶುಪಾಲೆ ಡಾ| ಸುಲತಾ ರಾಜಾರಾಮ್, ಉಪಪ್ರಾಂಶುಪಾಲ ಸುಬ್ರಹ್ಮಣ್ಯ ಸಿ, ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ಸುಬ್ಬ ಕಾರಡ್ಡ, ಇಸಿ ಪ್ರಿನ್ಸಿಪಾಲ್ ರೇಷ್ಮಾ ಸಿ ನಾಯಕ್, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರಶ್ಮಿ, ಮಂಜುಳಾ, ಲಕ್ಷ್ಮೀಕಾಂತ್, ಸಮರ್ಥ್ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.