ಬೆಳ್ತಂಗಡಿ: ಕರ್ನಾಟಕ ಸಿವಿಲ್ ಪೊಲೀಸ್ ಇಲಾಖೆ ಸೇರ್ಪಡೆಗೆ ಅರ್ಜಿದಾರರಾಗಿರುವ 4100 ಅಭ್ಯರ್ಥಿಗಳಿಗೆ ನೇಮಕಾತಿ ಸಂಬಂಧಿತ ಲಿಖತ ಪರೀಕ್ಷೆ ನ. 17 ರಂದು ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಎಸ್ಡಿಎಂ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಲಿದೆ ಎಂದು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ತಿಳಿಸಿದ್ದಾರೆ. ಬೆಳಿಗ್ಗೆ 11 ರಿಂದ 12ರವರೆಗೆ ನಡೆಯಲಿದೆ.ಜಿಲ್ಲೆಗೆ ಸಂಬಂಧಿಸಿದ ಆಯ್ಕೆ ಪ್ರಕ್ರಿಯೆ ಇದಾಗಿದ್ದು, ಇದರಲ್ಲಿ ಜಿಲ್ಲೆಯ ಹೊರಗಿನವರೂ ಕೂಡ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಅವರೂ ಈ ಪರೀಕ್ಷೆಗೆ ಹಾಜರಾಗಲಿದ್ದಾರೆ. ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳು ಜಿಲ್ಲಾ ಎಸ್.ಪಿ ಲಕ್ಷ್ಮೀಪ್ರಸಾದ್ ನೇತೃತ್ವದಲ್ಲಿ ನಡೆದಿದೆ ಎಂದರು.