HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಪೆರೋಡಿತ್ತಾಯ ಕಟ್ಟೆ ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ತೆಂಕಕಾರಂದೂರು: ಇಲ್ಲಿಯ ಪೆರೋಡಿತ್ತಾಯ ಕಟ್ಟೆ ಸ ಉ. ಪ್ರಾ .ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಡಿ.21ರಂದು ನಡೆಯಲಿರುವ ಶಾಲಾ ವಾರ್ಷಿಕೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನ.14 ರಂದು ನಡೆಯಿತು.


ಆಮಂತ್ರಣ ಪತ್ರಿಕೆಯನ್ನು ಹಿರಿಯ ಸಾಹಿತಿ, ಶಿಕ್ಷಣ ಪ್ರೇಮಿ ಪ.ರಾಮಕೃಷ್ಣ ಶಾಸ್ತ್ರಿ ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಹೆಗ್ಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನೇಮು ಸಪಲ್ಯ, ಶಾಲಾ ಮುಖ್ಯಶಿಕ್ಷಕಿ ಪದ್ಮಾವತಿ, ಸಹ ಶಿಕ್ಷಕ ದೇವುದಾಸ್ ನಾಯಕ್,ಶಾಲಾ ವಿದ್ಯಾರ್ಥಿ ನಾಯಕ ಬಿ. ಮಹಮ್ಮದ್ ಇಮ್ರಾನ್, ನಾಯಕಿ ತಾಸೀರಾ ಉಪಸ್ಥಿತರಿದ್ದರು.


ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಹಳೆವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿ ಎಲ್ಲಾ ಸದಸ್ಯರುಗಳು, ಶಾಲಾ ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.