ವಾಣಿ ಕಾಲೇಜು ವಾರ್ಷಿಕ ಕ್ರೀಡಾಕೂಟ

‘ಮನಸ್ಸು ಹಾಗೂ ದೇಹದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗುತ್ತದೆ’ ಎಂದು ಬೆಳ್ತಂಗಡಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಶ್ರೀನಿವಾಸ ಗೌಡ ಹೇಳಿದರು . ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ, ಜೀವನದಲ್ಲಿ ಸೋಲು ಗೆಲುವು ಸಹಜ, ಸೋಲನ್ನು ಗೆಲುವಾಗಿ ಪರಿವರ್ತಿಸಿಕೊಳ್ಳೂವ ಬುದ್ದಿವಂತಿಕೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ  ಜಿ.ಸೋಮೇ ಗೌಡ ಅಧ್ಯಕ್ಷತೆ ವಹಿಸಿದ್ದರು . ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿನೇಶ್ ಗೌಡ, ವಾಣಿ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಿತ್ಯಾನಂದ ನಾವೂರು, ಮುಖ್ಯೋಪಾಧ್ಯಾಯ  ಲಕ್ಷ್ಮೀ ನಾರಾಯಣ ಕೆ, ಕಾಲೇಜಿನ ಉಪಪ್ರಾಂಶುಪಾಲ  ವಿಷ್ಣುಪ್ರಕಾಶ್ ಎಂ , ಕ್ರೀಡಾ ಸಂಯೋಜಕ ಸುಧೀರ್ ಕೆ ಎನ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಡಿ.ಯದುಪತಿ ಗೌಡ ಸ್ವಾಗತಿಸಿದರು. ಉಪನ್ಯಾಸಕಿ  ಅನುಷಾ ಎ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಸಂಯೋಜಕರಾದ  ಶಂಕರ್ ರಾವ್.ಬಿ ವಂದಿಸಿದರು. 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.