ಗುರುನಾರಾಯಣ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಪ್ರಚಾರ, ವಾಚನ, ಪ್ರವಚನ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ, ಬಿಲ್ಲವಾ ಮಹಿಳಾ ವೇದಿಕೆ, ಬೆಳ್ತಂಗಡಿ ಇದರ ಸಹಕಾರದೊಂದಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಅಧ್ಯಯನ ಪೀಠದ ವತಿಯಿಂದ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಸಭಾಭವನದಲ್ಲಿ ಇಂದು(ಡಿ.6) ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಪ್ರಚಾರ ಕಾರ್ಯಕ್ರಮದಡಿ ವಾಚನ ಪ್ರವಚನ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ದೀಪ ಬೆಳಗಿಸಿ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಮನೋಹರ ಇಳಂತಿಲ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ರಾಜಶ್ರೀ ರಮಣ್ ಉಪಸ್ಥಿತರಿದ್ದರು.
ತೋನ್ಸೆ ಪುಷ್ಕಳ ಕುಮಾರ್ ಮತ್ತು ಡಾ| ದಿನಕರ ಪಚ್ಚನಾಡಿಯವರು ವಾಚನ ಪ್ರವಚನ ನಡೆಸಿಕೊಟ್ಟರು. ಬಿಲ್ಲವ ಮಹಿಳಾ ವೇದಿಕೆಯ ಸದಸ್ಯರು ಪ್ರಾರ್ಥನೆ ನೆರವೇರಿಸಿ, ಸಂಘದ ಪ್ರದಾನ ಕಾರ್ಯದರ್ಶಿ ನಾರಾಯಣ ಸುವರ್ಣ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಂಜಿತ್ ಹೆಚ್ ಡಿ ವಂದಿಸಿದರು.
ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳು, ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು, ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬ್ರಹ್ಮಶ್ರೀ ನಾರಾಯಣ ಗುರುಗಳ ಚರಿತ್ರೆ ಬಗ್ಗೆ ಸದುಪಯೋಗ ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.