ಬೆಳ್ತಂಗಡಿ: ಅರಣ್ಯ ಇಲಾಖೆಯ ಕುವೆಟ್ಟು ವಿಭಾಗದಲ್ಲಿ ಅರಣ್ಯ ರಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ನಿರ್ಮಲ್ ಕುಮಾರ್(59ವ) ಅವರು ಡಿ.7ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.ಇವರು ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ನೆರಿಯ, ಪುದುವೆಟ್ಟು, ಬೆಳ್ತಂಗಡಿ ಸೇರಿದಂತೆ ಒಟ್ಟು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.