ಬಳಂಜ : 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಳಂಜ ಬಿಲ್ಲವ ಸಂಘ

ಬಳಂಜ : ಸುಮಾರು 40 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಬಳಂಜ ಬಿಲ್ಲವ ಸಂಘ ಸಮಾಜಮುಖಿ ಚಿಂತನೆಯೊಂದಿಗೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. 1 ಕೋಟಿ ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ನಿರ್ಮಿಸುವಲ್ಲಿ ಇಲ್ಲಿನ ಒಗ್ಗಟ್ಟು ಹಾಗೂ ಸಂಘಟನೆಯ ಶಕ್ತಿ ಎದ್ದು ಕಾಣುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಹೇಳಿದರು.
ಅವರು ಡಿ.8 ರಂದು ಬಳಂಜ ಬಿಲ್ಲವ ಸಂಘದಲ್ಲಿ ನಡೆದ ಸಭೆಯಲ್ಲಿ ಸನ್ಮಾನವನ್ನು ಸ್ವೀಕರಿಸಿ, ಮಾತನಾಡಿದರು.
ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ವಹಿಸಿ ಮಾತನಾಡಿ ಎಲ್ಲರ ಸಹಕಾರದಿಂದ ಸಂಘದ ಕಾಮಗಾರಿ ಪ್ರಗತಿಯಲ್ಲಿ ಸಾಗುತ್ತಿದ್ದು, ಮುಂದಿನ ಕೆಲಸಕ್ಕೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.
ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಯುವರಾಜ ವೈ ಎಲ್ಯೋಟ್ಟು, ತಾಲೂಕು ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಂಜಿತ್ ಹೆಚ್.ಡಿ, ಸಂಘದ ಕಾರ್ಯದರ್ಶಿ ಯೋಗೀಶ್ ಪೂಜಾರಿ ಯೈಕುರಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಜಗದೀಶ್ ಬಳ್ಳಿದಡ್ಡ ಉಪಸ್ಥಿತರಿದ್ದರು.

ಸನ್ಮಾನ
ಬೆಳ್ತಂಗಡಿ ತಾಲೂಕು ಯುವ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾಗಿ ಮೊದಲ ಬಾರಿಗೆ ಸಂಘಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಕೆ. ಹರೀಶ್ ಕುಮಾರ್‌ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.