ನಾವೂರಿನ ಕೋಳಿ ಸಾಗಾಟ ವಾಹನದಿಂದ ನಗದು ಕಳವು ಪ್ರಕರಣ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕಿನ ನಾವೂರು ಎನ್.ಎ ಉಸ್ಮಾನ್ ಅವರ ಕೋಳಿ ಸಾಗಾಟ ಮಾಡುವ ವಾಹನದಲ್ಲಿರಿಸಿದ್ದ 23 ಸಾವಿರ ರೂ. ನಗದನ್ನು ಕಳವು ಮಾಡಿದ ಆರೋಪದಲ್ಲಿ ಇಬ್ಬರು ಕಳ್ಳರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು ನಗದು ಸಹಿತ ಕೃತ್ಯಕ್ಕೆ ಬಳಸಿದ ಮಾರುತಿ ಓಮ್ನಿ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಮಹಮ್ಮದ್ ನೌಫಾಲ್ ಮತ್ತು ಫಾರೂಕ್ ಎಂಬವರೆಂದು ಗುರುತಿಸಲಾಗಿದೆ.
ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಎಸ್‌ಐ ನಂದಕುಮಾರ್ ಎಂ.ಎಂ ಅವರ ನೇತೃತ್ವದ ತಂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದೆ.
ಕಳವು ಮಾಡಿದ ನಗದು, ಕಳವಿಗೆ ಉಪಯೋಗಿಸಿದ ಎರಡು ವಾಹನಗಳ ಒಟ್ಟು ಮೌಲ್ಯ ರೂ.2.50 ಲಕ್ಷ ರೂ. ಗಳೆಂದು ಅಂದಾಜಿಸಲಾಗಿದ್ದು ಸೊತ್ತುಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.