ಬಂಟರ ಯಾನೆ ನಾಡವರ ಮಾತೃ ಸಂಘ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಆಯ್ಕೆ

ಬೆಳ್ತಂಗಡಿ: ದ.ಕ , ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಸಂಘದ ಹಾಲಿ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈಯವರು ಪುನರಾಯ್ಕೆಯಾಗಿದ್ದಾರೆ.
ಡಿ.8 ರಂದು ಮಂಗಳೂರು ಬಂಟ್ಸ್ ಹಾಸ್ಟೆಲ್‌ನ ಶ್ರೀ ರಾಮಕೃಷ್ಣ ಶಾಲೆಯಲ್ಲಿ ಜರುಗಿದ ಚುನಾವಣೆಯಲ್ಲಿ ಚಲಾವಣೆಯಾದ 7317 ಮತಗಳ ಪೈಕಿ ಮಾಲಾಡಿ ಅಜಿತ್ ಕುಮಾರ್ ರೈಯವರು 4791 ಮತಗಳನ್ನು ಪಡೆದಿದ್ದು. ಪ್ರತಿಸ್ಪರ್ಧಿ ಸುರೇಶ್ಚಂದ್ರ ಶೆಟ್ಟಿ 2193 ಮತಗಳನ್ನು ಪಡೆದಿದ್ದಾರೆ. ಈ ಹಿಂದೆ 3 ಬಾರಿ ಮಾತೃ ಸಂಘದ ಅಧ್ಯಕ್ಷರಾಗಿ ಇವರು ಆಯ್ಕೆಯಾಗಿದ್ದು, 2 ಬಾರಿ ಚುನಾಯಿತರಾಗಿ, ಕಳೆದ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದರು.


ಬೆಳ್ತಂಗಡಿಯಿಂದ 4 ಮಂದಿ ನಿರ್ದೇಶಕರಾಗಿ ಆಯ್ಕೆ:
ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ಬೆಳ್ತಂಗಡಿಯಿಂದ ಬಂಟರ ಸಂಘದ ಅಧ್ಯಕ್ಷ ಎಸ್. ಜಯರಾಂ ಶೆಟ್ಟಿ, ಮಾಜಿ ಅಧ್ಯಕ್ಷ ರಘುರಾಮ ಶೆಟ್ಟಿ ಸಾದನಾ, ಜಯರಾಮ ಭಂಡಾರಿ ಧರ್ಮಸ್ಥಳ ಹಾಗೂ ಆಶಾಲತಾರವರು ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ ಎಂದು ಮಾತೃ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.