ಅಶ್ಲೀಲ ವೆಬ್‌ಸೈಟ್ ನಿಷೇಧಿಸುವಂತೆ ಪ್ರಧಾನಿ ಮೋದಿಯವರಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರಿಂದ ಪತ್ರ

ಬೆಳ್ತಂಗಡಿ : ಇತ್ತೀಚ್ಛೆಗೆ ಭಾರತದಲ್ಲಿ ಹಲವೆಡೆ ಲೈಂಗಿಕ ಕಿರುಕುಳಗಳ ಅಪರಾಧ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಅಶ್ಲೀಲ ವೆಬ್‌ಸೈಟ್‌ಗಳು. ಹೀಗಾಗಿ ಅವುಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಬೇಕಾಗಿ ಬೆಳ್ತಂಗಡಿ ಧರ್ಮಾಧ್ಯಕ್ಷರು ಬಿಷಪ್ ಲಾರೆನ್ಸ್ ಮುಕ್ಕುಯಿಯವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುತ್ತಾರೆ.
ಮಹಿಳೆಯರ ಮತ್ತು ಮಕ್ಕಳ ವಿರುದ್ದ ನಡೆಯುವ ಲೈಂಗಕ ದೌರ್ಜನ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರ ಮಾಡುವ ಕೆಲಸವೂ ನಡೆಯುತ್ತಿದೆ. ಇವೆಲ್ಲಕ್ಕೂ ಒಂದು ಕೊನೆ ಹಾಕಲೇ ಬೇಕಾಗಿದೆ. ಏಕೆಂದರೆ ಮಕ್ಕಳು ಮತ್ತು ಯುವಕರು ಹೆಚ್ಚಾಗಿ ಈ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಾರೆ. ಅವರ ಮನಸ್ಥಿತಿ ಹಾಳಾಗಲು ಈ ರೀತಿಯ ಚಿತ್ರಗಳು ಪ್ರಮುಖ ಪ್ರಾತ್ರ ವಹಿಸುತ್ತದೆ. ಆದುದರಿಂದ ಅಶ್ಲೀಲ ಜಾಲತಾಣಗಳನ್ನೂ ಮತ್ತು ಅಶ್ಲೀಲ ಮಾಹಿತಿಗಳನ್ನೂ ಸಂಪೂರ್ಣವಾಗಿ ನಿಷೇಧಿಸ ಬೇಕೆಂದು ಪತ್ರದ ಮೂಲಕ ವಿನಂತಿಸಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.