ಮಂಗಳೂರಿನಲ್ಲಿ ನಿಯಂತ್ರಣಕ್ಕೆ ಬಾರದ ಘರ್ಷಣೆ, ಕರ್ಫ್ಯೂ ಜಾರಿ

 ಸಿಎಎ ವಿರುದ್ಧ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಗಲಭೆ, ಘರ್ಷಣೆ, ಕಲ್ಲು ತೂರಾಟ ನಡೆದ ಹಿನ್ನಲೆಯಲ್ಲಿ ಮಂಗಳೂರು ಉತ್ತರ ಉಪವಿಭಾಗ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪಿ.ಎಸ್. ಹರ್ಷ ತಿಳಿಸಿದ್ದಾರೆ. ಪೌರತ್ವ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮೊದಲಿಗೆ ಲಾಠಿಚಾರ್ಜ್ ನಡೆಸಿದ್ದರು. ಇದರಿಂದ ಹಲವರಿಗೆ ಗಾಯಗಳಾಗಿದ್ದವು. ಇದರ ಬೆನ್ನಲ್ಲೇ ಪ್ರತಿಭಟನಕಾರರು ಪೊಲೀಸರಿಗೆ ಹಾಗೂ ಇತರೆ ವಾಹನಗಳಿಗೆ ಕಲ್ಲುತೂರಾಟ ನಡೆಸಿದ್ದರು. ಇದರಿಂದ ಅಶ್ರುವಾಯು ಸಿಡಿಸಿದ್ದಾರೆ. ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪರಿಸರದ ಹತ್ತಿರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ. ಕೆಲಕಾಲ ಕಂಕನಾಡಿಯಿಂದ ಸೇಟ್‌ಬ್ಯಾಂಕ್‌ವರೆಗೆ ವಾಹನಗಳು ನಿಂತಿದ್ದು, ಸಂಚಾರ ಅಸ್ತವಸ್ಥಗೊಂಡಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.