ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಧನುರ್ಮಾಸ ಪೂಜೆ ಹಾಗೂ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Advt_NewsUnder_1
Advt_NewsUnder_1
Advt_NewsUnder_1

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಈ ವರ್ಷದ ಧನುರ್ಮಾಸ ಪೂಜೆ ಹಾಗೂ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ  ಡಿ.16 ರಂದು ಆರಂಭವಾಗಿದೆ.ಇಂದಿನ ದಿನ ನಮ್ಮ ದೇಶದ ಶ್ರೇಷ್ಠ ಸಂತರೂ ಸಾಮಾಜಿಕ, ಧಾರ್ಮಿಕ, ಅಧ್ಯಾತ್ಮಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ಹಿರಿಯ ಚೇತನ ಪರಮ ಪೂಜ್ಯ ಶ್ರೀ ಶ್ರೀ ಪೇಜಾವರ ವಿಶ್ವೇಶತೀರ್ಥ ಶ್ರೀಪಾದಂಗಳವರು ತಮ್ಮ ಅನಾರೋಗ್ಯದಿಂದ ಶೀಘ್ರವಾಗಿ ಚೇತರಿಸುವಂತಾಗಲಿ,ಅವರು ಮರಳಿ ನಮ್ಮ ಸಮಾಜಕ್ಕೆ ಮಾರ್ಗದರ್ಶನವನ್ನು ಕೊಡುವಂತಾಗಲಿ ಎಂದು ಸಾಮೂಹಿಕ ಪ್ರಾರ್ಥನೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿಯ  ಶಾಸಕರಾದ  ಹರೀಶ್ ಪೂಂಜರವರು ಉಪಸ್ಥಿತರಿದ್ದರು. ತಾಲೂಕಿನ ಗಣ್ಯರಾದ ಶಿವಳ್ಳಿ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಡಾ। ದಯಾಕರ್ , ರೋಟರಿ ಕ್ಲಬ್ ನ ಅಧ್ಯಕ್ಷರಾದ ರೊ ಜಯರಾಮ್ ಎಸ್, ರೋಟರಿ ಕ್ಲಬ್ ನ ಕಾರ್ಯದರ್ಶಿಗಳಾದ ರೊ ಪ್ರಕಾಶ್, ಕೊಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶಂಕರ ಭಟ್,ಬಂಗಾಡಿ ಸಿ ಎ ಬ್ಯಾಂಕ್ ನ ಅಧ್ಯಕ್ಷರಾದ ಲಕ್ಷ್ಮಣ ಗೌಡ, ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಉಮೇಶ್ ಎ ಬಿ, ಸಮಿತಿಯ ಪದಾಧಿಕಾರಿಗಳು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು . ಅರ್ಚಕರಾದ ವೆಂಕಟ್ರಮಣ ಭಟ್ ಪೂಜಾ ವಿಧಿ ವಿಧಾನಗಳನ್ನು ನಡೆಸಿ ಕೊಟ್ಟರು.ಡಾ ಪ್ರದೀಪ್ ಅವರು ವಿಷ್ಣು ಸಹಸ್ರನಾಮ ಪಠಣವನ್ನು ಭಕ್ತರ ಮೂಲಕ ನೆರವೇರಿಸಿದರು. ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.