ಉತ್ತಮ ಭವಿಷ್ಯದತ್ತ ಸ್ಟಾರ್‌ಲೈನ್ ವಿದ್ಯಾಸಂಸ್ಥೆ: ಅಭಿನಂದನ್ ಹರೀಶ್ ಕುಮಾರ್

ನಡ: ಸ್ಟಾರ್‌ಲೈನ್ ಆಂಗ್ಲಮಾಧ್ಯಮ ಶಾಲೆ ಮಂಜೊಟ್ಟಿ ನಡ ಇಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಬೆಳ್ತಂಗಡಿ ತಾಲೂಕು ಯುವ ಕಾಂಗ್ರೇಸ್ ಅಧ್ಯಕ್ಷ ಮಂಜುಶ್ರೀ ಜೇಸಿಐ ಅಧ್ಯಕ್ಷರು ಆಗಿರುವ ಅಭಿನಂದನ್ ಹರೀಶ್ ಕುಮಾರ್ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಸ್ಟಾರ್‌ಲೈನ್ ವಿದ್ಯಾಸಂಸ್ಥೆಯು ಮಂಚೂಣಿಯಲ್ಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಜನಾಬ್ ಸಯ್ಯದ್ ಹಬೀಬ್‌ರವರು ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅಭಿನಂದನೆಯನ್ನು ಸಲ್ಲಿಸಿದರು.
ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಖಜಾಂಚಿಯಾದ ಸಯ್ಯದ್ ಇರ್ಫಾನ್‌ರವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಜಾಕಿನ್ ಬಿನ್ ಕಾರ್ಯಕ್ರಮದ ಅತಿಥಿಗಳನ್ನು ಸ್ವಾಗತಿಸಿ, ಶಾಲಾ ಶಿಕ್ಷಕಿ ಮೇರಿ ಆನ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕಿ ನಸೀಬಾ ತಾಜ್ ಧನ್ಯವಾದವಿತ್ತರು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿಕೊಟ್ಟರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.