ನಿಡಿಗಲ್‌ ನೂತನ ಸೇತುವೆ: ಪ್ರಾಯೋಗಿಕವಾಗಿ ವಾಹನಗಳು ಓಡಾಟ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಚಿಕ್ಕಮಗಳೂರು 73ರ ಕಲ್ಮಂಜ ಸಮೀಪದ ನಿಡಿಗಲ್‌ನಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಾಣವಾದ ಸೇತುವೆಯಲ್ಲಿ ಪ್ರಾಯೋಗಿಕವಾಗಿ ಜ.02 ರಂದು ವಾಹನಗಳ ಓಡಾಟ ನಡೆಯಿತು.

15 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸೇತುವೆಯ ಸಂಪರ್ಕ ರಸ್ತೆಗೆ ಡಾಮರು ಕಾಮಗಾರಿ ನಡೆಯುತ್ತಿದ್ದು, ಹಳೆ ಸೇತುವೆಯಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿಂದ ಹೊಸ ಸೇತುವೆಯಲ್ಲಿ ಗುರುವಾರ ಒಂದು ದಿನದ ಮಟ್ಟಿಗೆ ವಾಹನ ಓಡಾಟಕ್ಕೆ ಅವಕಾಶ ಮಾಡಿ ಕೊಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಇಲಾಖೆ ಸಂಚಾರಕ್ಕೆ ಅನುವು ಮಾಡಿಕೊಟ್ಟಲ್ಲಿ ಸಂಸದರ ಸಮಯಾವಕಾಶ ನೋಡಿಕೊಂಡು ವಾಹನ ಸಂಚಾರಕ್ಕೆ ಮುಕ್ತ ಗೊಳಿಸಲಾಗುವುದು ಎಂದು ಶಾಸಕ ಹರೀಶ್‌ ಪೂಂಜ ಅವರು ಕಲ್ಮಂಜದಲ್ಲಿ ಬುಧವಾರ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ತಿಳಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.