ಮುಚ್ಚುವ ಸ್ಥಿತಿಯಲ್ಲಿದ್ದ ಶಾಲೆಯಲ್ಲಿ ವಜ್ರಮಹೋತ್ಸವ ಸಂಭ್ರಮ

ಕೂಕ್ರಬೆಟ್ಟು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನವರಿ 4ರಂದು ಶನಿವಾರ ವಜ್ರಮಹೋತ್ಸವ ಸಮಾರಂಭವನ್ನು ಶಿಕ್ಷಣ ಜಾತ್ರೆಯಂತೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್ ಹೇಳಿದ್ದಾರೆ.


ಬೆಳಿಗ್ಗೆ 9.30ಕ್ಕೆ ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಜುಪೂಜಾರಿ ನೆರವೇರಿಸಲಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಸೇರಿದಂತೆ ಇತರೆ ಜನಪ್ರತಿನಿಧಿಗಳು, ದಾನಿಗಳು ಭಾಗವಹಿಸಲಿದ್ದಾರೆ.

 ಸಂಜೆ 7ರಿಂದ ಅಂಗನವಾಡಿ ಪುಟಾಣಿಗಳಿಂದ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9ಕ್ಕೆ ಶಾಲಾ ಮಕ್ಕಳಿಂದ ಮಹಿಷ ಮರ್ಧಿನಿ ಯಕ್ಷಗಾನ ಪ್ರದರ್ಶನವಿದೆ. ಬಳಿಕ ಹಳೆ ವಿದ್ಯಾರ್ಥಿಗಳಿಂದ ತುಳುನಾಡ ಪೊರ್ಲು ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.  ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸುವರು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.