ಕೂಕ್ರಬೆಟ್ಟು ಶಾಲೆ- ಬಹುಮಾನ ವಿತರಣೆ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಶಾಲೆಗಳು ಊರಿನ ಕಲಶ ಇದ್ದಂತೆ. ಅವುಗಳನ್ನು ಉಳಿಸಿ, ಬೆಳೆಸುವುದು ಊರವರ, ಹಳೆವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಿದೆ ಎಂದು ಕೂಕ್ರಬೆಟ್ಟು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯ ಅಧ್ಯಕ್ಷ ಜಯಂತ ಕೋಟ್ಯಾನ್ ಹೇಳಿದರು.

ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಶಾಲೆಯ ವಜ್ರಮಹೋತ್ಸವ ಪ್ರಯುಕ್ತ ಶಾಲಾ ಮಕ್ಕಳಿಗೆ, ಊರವರಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಯ ವಿಜೇತರಿಗೆ ಶನಿವಾರ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ವರದಾನವಾಗಿದೆ. ಯಾರೂ ಸರ್ಕಾರಿ ಶಾಲೆಯನ್ನು ತಾತ್ಸಾರದಿಂದ ಕಾಣಬಾರದು. ಕೂಕ್ರಬೆಟ್ಟು ಶಾಲೆಗೆ ಸುಸಜ್ಜಿತ ಕಟ್ಟಡ ಮತ್ತು ಮೂಲಸೌಕರ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ನಿವೃತ್ತ ಅಧ್ಯಾಪಕ ಎಂ.ಕೆ. ಆರಿಗ, ನಾರಾವಿ ವಿಎಸ್‌ಎಸ್‌ ಬ್ಯಾಂಕ್‌ ನಿವೃತ್ತ ಸಿಇಒ ವಿಜಯಕುಮಾರ್‌ ಬಂಗ, ನಿವೃತ್ತ ಶಿಕ್ಷಣ ಅಣ್ಣಪ್ಪ ಹೆಗ್ಡೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಗಿರೀಶ್‌ ಕುಮಾರ್ ಶುಭ ಹಾರೈಸಿದರು. ಎಸ್‌ಡಿಎಂಸಿ ಅಧ್ಯಕ್ಷ ರಾಜುಪೂಜಾರಿ ಧ್ವಜಾರೋಹಣ ನೆರವೇರಿಸಿದರು.
ಪ್ರಗತಿಬಂಧು ಒಕ್ಕೂಟದ ನಾರಾವಿ ವಲಯಾಧ್ಯಕ್ಷ ಯಶೋಧರ ಬಂಗೇರ, ಉದ್ಯಮಿ ಅಬೂಬಕ್ಕರ್‌, ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಕಾರ್ಯದರ್ಶಿ ನಾರಾಯಣ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಶ್ ಹಾರೊದ್ದು, ಕಾರ್ಯದರ್ಶಿ ಮುಖೇಶ್ ಹೆಗ್ಡೆ ವೇದಿಕೆಯಲ್ಲಿ ಇದ್ದರು.

ಶಾಲಾ ಮುಖ್ಯ ಶಿಕ್ಷಕಿ ಸುಫಲಾ ಸ್ವಾಗತಿಸಿದರು. ಸಹಶಿಕ್ಷಕಿ ಹರ್ಷಲಾ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಗೀತಾ ವಂದಿಸಿದರು. ಗೌರವ ಶಿಕ್ಷಕಿಯರಾದ ದಿವ್ಯಶ್ರೀ, ಮನೀಶಾ, ಜಯಶ್ರೀ, ಯಶೋಧ, ಸುಗಂಧಿ, ಅಂಗನವಾಡಿ ಕಾರ್ಯಕರ್ತೆ ಪ್ರೇಮಾ ಬಹುಮಾನ ವಿಜೇತರ ವಿವರ ನೀಡಿದರು. ವಿವಿಧ ಸಮಿತಿಗಳ ಪದಾಧಿಕಾರಿಗಳು ಇದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.