ಧರ್ಮಶ್ರೀ(ವಿಸ್ತೃತ) ನೂತನ ಕಟ್ಟಡ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ  ವಿಸ್ತೃತ ಕಟ್ಟಡ ಧರ್ಮಶ್ರೀ ಇದರ ಉದ್ಘಾಟನಾ ಸಮಾರಂಭ ಮತ್ತು ಧಾರ್ಮಿಕ ಶ್ರದ್ದಾ ಕೇಂದ್ರಗಳ ಸ್ವಚ್ಚತಾ ಅಭಿಯಾನದ ಅಂಗವಾಗಿ 20,000 ತ್ಯಾಜ್ಯ ಸಂಗ್ರಹಣಾ ಬುಟ್ಟಿಗಳ ವಿತರಣಾ ಸಮಾರಂಭ ಹಾಗೂ ಧರ್ಮಸ್ಥಳ ವಲಯದ ಒಕ್ಕೂಟ ಪದಗ್ರಹಣ ಸಮರಂಭ ಜ.24 ರಂದು ಧರ್ಮಸ್ಥಳ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ವಹಿಸಿದ್ದರು. ನೂತನ ಕಛೇರಿ ಉದ್ಘಾಟನೆ ರಾಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವರಾದ ಡಿ.ವಿ ಸದಾನಂದ ಗೌಡ ನೆರವೇರಿಸಿದರು.


ತ್ಯಾಜ್ಯ ಸಂಗ್ರಹಣಾ ಬುಟ್ಟಿಗಳ ವಿತರಣೆಯನ್ನು ಮುಜರಾಯಿ ಮತ್ತು ಮೀನುಗಾರಿಕಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೂತನ ಅಧ್ಯಕ್ಷರಿಗೆ ಅಭಿನಂದನೆ ನೆರವೇರಿಸಿದರು. ಜನಮಂಗಳ ಕಾರ್ಯಕ್ರಮ ಸಲಕರಣೆಗಳ ವಿತರಣೆಯನ್ನು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಡಿ. ಹರ್ಷೆಂದ್ರ ಕುಮಾರ್, ಧರ್ಮಸ್ಥಳ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ ಹೆಗ್ಗಡೆ, ತಾ.ಪಂ ಸದಸ್ಯೆ ಧನಲಕ್ಷ್ಮೀ ಜನಾರ್ದನ್, ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷ ಚಂದನ್ ಪ್ರಸಾದ್ ಕಾಮತ್ ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.