ಯು.ಟಿ ಖಾದರ್ ನಿಂದನೆ: ಯುವ ಕಾಂಗ್ರೆಸ್‌ನಿಂದ ದೂರು

ಬೆಳ್ತಂಗಡಿ: ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಜ. 27 ರಂದು ಬಿಜೆಪಿ ವತಿಯಿಂದ ನಡೆದ ಪೌರತ್ವ ಕಾಯ್ದೆ ಪರ ಸಮಾವೇಶದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಯು. ಟಿ ಖಾದರ್ ಅವರನ್ನು ನಿಂದಿಸಿ ಬಹಿರಂಗವಾಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸುವಂತೆ ಕೋರಿ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಇಲ್ಲಿನ ಠಾಣೆಗೆ ದೂರು ನೀಡಲಾಯಿತು.
ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಉಪಾಧ್ಯಕ್ಷ ಸಲೀಂ ಗುರುವಾಯನಕೆರೆ, ಸಹಿತ ಇರುವ ನಿಯೋಗ ಸಬ್ ಇನ್ಸ್‌ಪೆಕ್ಟರ್ ನಂದ ಕುಮಾರ್ ಅವರನ್ನು ಭೇಟಿ ಮಾಡಿ ದೂರು ನೀಡಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.