ಬೆಳ್ತಂಗಡಿ: ಪ್ರೆಸ್ಕ್ಲಬ್ ಆಫ್ ಬೆಂಗಳೂರು ಇವರು ನೀಡುವ `ಪ್ರೆಸ್ಕ್ಲಬ್ ವರ್ಷದ ವ್ಯಕ್ತಿ’ ಪ್ರಶಸ್ತಿಯನ್ನು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರು ಜ.೨೯ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರದಾನ ಮಾಡಿದರು.
ಪ್ರೆಸ್ಕ್ಲಬ್ ಆಫ್ ಬೆಂಗಳೂರಿನಲ್ಲಿ ನಡೆದ ಈ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಸಿ.ಎನ್ ಆಶ್ವತ್ಥ್ನಾರಾಯಣ, ಲಕ್ಷ್ಮಣ ಸವದಿ, ಪ್ರೆಸ್ಕ್ಲಬ್ ಅಧ್ಯಕ್ಷ ಕೆ. ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಎಚ್.ವಿ ಕಿರಣ್, ಖ್ಯಾತ ಚಲನಚಿತ್ರ ಕಲಾವಿದ ಪುನಿತ್ ರಾಜ್ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.