‘ಆಕಾಶವಾಣಿಗೆ ಖಾಸಗೀಕರಣದ ಆತಂಕ’


ಉಜಿರೆ: ಭಾರತೀಯ ಸಂಸ್ಕೃತಿಯ ವೈವಿಧ್ಯಮಯ ಸ್ವರೂಪವನ್ನು ಬಿಂಬಿಸಿದ ಆಕಾಶವಾಣಿಯಂತಹ ಮಾಧ್ಯಮವನ್ನು ಖಾಸಗೀಕರಣಗೊಳಿಸುವ ಪ್ರಯತ್ನಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಧಾರವಾಡ ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ.ಬಸವರಾಜ್ ಸಾದರ ನುಡಿದರು.
ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ ‘ಬಾನುಲಿ ಬರಹ’ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕಳೆದ ಕೆಲವು ದಶಕಗಳಿಂದ ಆಕಾಶವಾಣಿ ಮಾಧ್ಯಮದ ಬೆಳವಣಿಗೆಗೆ ಸಂಬಂಧಿಸಿದಂತೆ ರಚನಾತ್ಮಕ ನೀತಿಗಳು ರೂಪುಗೊಳ್ಳಲಿಲ್ಲ. ಹಲವು ವರ್ಷಗಳಿಂದ ಖಾಯಂ ನೇಮಕಾತಿ ಪ್ರಕ್ರಿಯೆಯೂ ನಡೆಯುತ್ತಿಲ್ಲ. ಆದಾಯ ತರುವ ಉದ್ಯಮಗಳ ಹಾಗೆ ಆಕಾಶವಾಣಿಯೂ ಕೂಡ ಲಾಭಗಳಿಸಬೇಕು ಎನ್ನುವ ನೀತಿನಿರೂಪಕರ ಯೋಚನೆಯು ಆಕಾಶವಾಣಿಗೆ ಬಹುದೊಡ್ಡ ಸವಾಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥ ಪ್ರೊ. ಭಾಸ್ಕರ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಸಂಧ್ಯಾ ಸ್ವಾಗತಿಸಿ, ಮೋಕ್ಷಾ ಕಾರ್ಯಕ್ರಮ ನಿರೂಪಿಸಿ, ಕಿರಣ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.