ಲಾಯಿಲ: ಜಾಗದ ವಿವಾದ ಕೊಲೆಯಲ್ಲಿ ಅಂತ್ಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಘಟನಾ ಸ್ಥಳದಲ್ಲಿ ಪೊಲೀಸರಿಂದ‌ ಮಹಜರು

ಬೆಳ್ತಂಗಡಿ : ವ್ಯಕ್ತಿಯೊಬ್ಬನನ್ನು ರಾಡ್ ನಿಂದ ಹೊಡೆದು, ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.  ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಾಂಧಿನಗರದಲ್ಲಿ ಈ ಘಟನೆ ಫೆ.೯ ರಂದು ನಡೆದಿದ್ದು, ಉಮೇಶ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಉಮೇಶ್ ಮುಂಬೈಯಲ್ಲಿ ಉದ್ಯೋಗ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಊರಿಗೆ ಬಂದಿದ್ದರು ಎನ್ನಲಾಗಿದೆ. ಮಾತ್ರವಲ್ಲದೇ ಜಾಗದ ವಿಚಾರಕ್ಕೆ ಅಪ್ಪ ಮತ್ತು ಮಗನಿಂದ ಉಮೇಶ್ ಕೊಲೆಯಾಗಿದೆ ಎನ್ನಲಾಗಿದೆ. ಕೊಲೆ ಮಾಡಿದ ಆರೋಪಿಗಳನ್ನು ಯೋಗೀಶ್ ಮತ್ತು ಜೀವನ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.