ನಾರಾವಿ : ಗುರು ಜಯಂತಿ ಹಾಗೂ ಸತ್ಯನಾರಾಯಣ ಪೂಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಾರಾವಿ : ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ನಾರಾವಿ, ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ನಾರಾವಿ ಇವರ ಆಶ್ರಯದಲ್ಲಿ 165ನೇ ವರ್ಷದ ಗುರುಜಯಂತಿ ಮತ್ತು ಶ್ರೀ ಸತ್ಯನಾರಾಯಣ ಪೂಜೆಯು ಫೆ-9 ರಂದು ನಾರಾವಿ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾವಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ರವೀಂದ್ರ ಪೂಜಾರಿ ವಹಿಸಿದ್ದರು.
ಕಾರ್ಕಳ ಶ್ರೀ ಭುವನೇಂದ್ರ ಕಾಲೇಜು ಪ್ರಾಂಶುಪಾಲ ಡಾ| ಮಂಜುನಾಥ ಪೂಜಾರಿ ಧಾರ್ಮಿಕ ಉಪಾನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಪೀತಾಂಬರ ಹೇರಾಜೆ, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಂಜಿತ್ ಹೆಚ್.ಡಿ, ಯುವವಾಹಿನಿ ವೇಣೂರು ಘಟಕ ನವೀನ್ ಪಚ್ಚೇರಿ, ನಾರಾವಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವ ಸಲಹೆಗಾರ ಎಚ್ ಲೋಕಯ್ಯ ಪೂಜಾರಿ, ಗ್ರಾ.ಪಂ ಉಪಾಧ್ಯಕ್ಷೆ ಯಶೋಧ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ದೀಕ್ಷಿತಾ, ಈದು-ಹೋಸ್ಮಾರು ಬಿಲ್ಲವ ಸಂಘದ ಗೌರವಧ್ಯಕ್ಷ ಜಗದೀಶ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಜಲತಾ ಉಪಸ್ಥಿತರಿದ್ದರು. ಕಾರ್ಯದರ್ಶಿ ಚಂದ್ರಶೇಖರ್ ಡಿ.ಕೆ,ಸ್ವಾಗತಿಸಿದರು ಕೋಶಾಧಿಕಾರಿ ವಸಂತ ಗುಣನಿಲ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.24  ರಿಂದ ಮಾ.2 ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪೀತಾಂಬರ ಹೇರಾಜೆ ಆಮಂತ್ರಣ ಪತ್ರಿಕೆಯನ್ನು ಕಾರ್ಯಕ್ರಮದಲ್ಲಿ ಬಿಡುಗಡೆ ಗೊಳಿಸಿ ಎಲ್ಲರನ್ನು ಆಹ್ವಾನಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.