ಫೆ-21 ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಗುರುಪೂಜೆ

Advt_NewsUnder_1
Advt_NewsUnder_1

ಬಳಂಜ : ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು, ತೆಂಕಕಾರಂದೂರು ಇವುಗಳ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರುಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ, ದೀಕ್ಷಾ ಗ್ರಂಥಿ ಧಾರಣೆ ಹಾಗೂ ಧಾರ್ಮಿಕ ಸಭೆಯು ಫೆ-21 ರಂದು ಬೊಳ್ಳಾಜೆಯಲ್ಲಿ ಜರುಗಲಿರುವುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಎಚ್.ಎಸ್ ವಹಿಸಲಿದ್ದಾರೆ. ಬೆಳ್ತಂಗಡಿ ಶ್ರೀ.ಗು.ಸ್ವಾ.ಸೇ.ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ, ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್, ನಾರಾವಿ ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್, ಆರ್‌ಟಿಒ ಅಧಿಕಾರಿ ಚರಣ್ ಕುಮಾರ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ನಾರಾವಿ ಗ್ರಾ.ಪಂ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಜಗದೀಶ್ ಡಿ.ಕೆ, ಪಿಡಬ್ಲ್ಯುಡಿ ಅಸಿಸ್ಟೆಂಟ್ ಇಂಜಿನಿಯರ್ ಗುರುಪ್ರಸಾದ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಂಜಿತ್ ಎಚ್.ಡಿ ಸುಧಾಮು, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್, ಸಂಘದ ನಿರ್ದೇಶಕ ಯುವರಾಜ್ ವೈ, ಭಾಗವಹಿಸಲಿದ್ದಾರೆ. ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಯತೀಶ್ ವೈ ಬಳಂಜ, ಕು| ಆಕರ್ಷ ಎಲ್ಯೋಟ್ಟು, ಸುಮಂತ್ ಬಿ. ಯೈಕುರಿ ಇವರುಗಳಿಗೆ ಸನ್ಮಾನ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.