ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಕೊರಗಪ್ಪ ನಾಯ್ಕ, ಕಾರ್ಯದರ್ಶಿಯಾಗಿ ಧನಲಕ್ಷ್ಮೀ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಸಮಿತಿ ಉಪಾಧ್ಯಕ್ಷರಾಗಿ ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ ಮುಂಡಾಜೆ ಮತ್ತು ಜಿಲ್ಲಾ ಕಾರ್ಯದರ್ಶಿಯಾಗಿ ತಾ.ಪಂ ಸದಸ್ಯೆ ಧನಲಕ್ಷ್ಮೀ ಜನಾರ್ದನ್ ಆಯ್ಕೆಯಾಗಿದ್ದಾರೆ.
ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ. ಕೊರಗಪ್ಪ ನಾಯ್ಕ ಅವರು ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಸಂಚಾಲಕರಾಗಿದ್ದಾರೆ. ಉಜಿರೆ ಕ್ಷೇತ್ರದ ಜಿ.ಪಂ ಸದಸ್ಯರಾಗಿದ್ದ ಅವರು ಅದೇ ವೇಳೆಯಲ್ಲಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಧರ್ಮಸ್ಥಳ ಕ್ಷೇತ್ರವನ್ನು ಪ್ರತಿನಿಧಿಸಿ ಜಿ.ಪಂ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಧನಲಕ್ಷ್ಮೀ ಜನಾರ್ದನ್ ಅವರು ಧರ್ಮಸ್ಥಳ ಕ್ಷೇತ್ರದ ತಾ.ಪಂ ಸದಸ್ಯೆ. ಇದಕ್ಕೂ ಮುನ್ನ ಒಂದು ಅವಧಿಯಲ್ಲಿ ಅವರು ಜಿ.ಪಂ ಸದಸ್ಯೆಯಾಗಿ ಆಯ್ಕೆಯಾಗಿದ್ದವರು ಇದೇ ವೇಳೆಯಲ್ಲಿ ಜಿ.ಪಂ ಉಪಾಧ್ಯಕ್ಷರಾಗಿಯೂ ಅಧಿಕಾರ ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.