ಸುಲ್ಕೇರಿ : ಶ್ರೀ ಮಹಮ್ಮಾಯಿ ದೇವಸ್ಥಾನದ ಬ್ರಹ್ಮಕಲಶಾಭೀಷೇಕೋತ್ಸವ ಶ್ರೀ ಸತ್ಯನಾರಾಯಣ ಪೂಜೆ

ಸುಲ್ಕೇರಿ : ಶ್ರೀ ಮಹಮ್ಮಾಯಿ ದೇವಸ್ಥಾನದ ಬ್ರಹ್ಮಕಲಶಾಭೀಷೇಕೋತ್ಸವದ ಸಂದರ್ಭದಲ್ಲಿ ಶ್ರೀ ಸತ್ಯನಾರಾಯಣ ಪೂಜೆಯು ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಮಾ-6 ರಂದು ದೇವಸ್ಥಾನದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಗುರುವಾಯನಕೆರೆ ಯೋಜನಾಧಿಕಾರಿ ಯಶವಂತ್, ಬ್ರಹ್ಮಕಲಶಾಭಿಷೇಕೋತ್ಸವ ಸಮಿತಿ ಅಧ್ಯಕ್ಷ ಸುಧೀರ್ ಎಸ್.ಪಿ , ಶ್ರೀ ವೇದಮೂರ್ತಿ ಶ್ರೀನಿವಾಸ ಉಪಾಧ್ಯಾಯ ಬೋರ್ಕಟೆ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಶಶಿಧರ ಮುದ್ರಾಜೆ, ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸುರೇಶ್ ಭಟ್, ಉಪಾಧ್ಯಕ್ಷ ಸದಾನಂದ ಗೌಡ, ಸೇವಾ ಪ್ರತಿನಿಧಿ ಮಮತಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಸಮಿತಿ ಕಾರ್ಯದರ್ಶಿ ರವಿಶೆಟ್ಟಿ ಸ್ವಾಗತಿಸಿ, ಮೇಲ್ವಿಚಾರಕ ಗಿರೀಶ್ ಕುಮಾರ್ ನಿರೂಪಿಸಿ, ಪೂಜಾ ಸಮಿತಿ ಅಧ್ಯಕ್ಷ ರಾಮ ಶೆಟ್ಟಿ ವಂದಿಸಿದರು. ನೂರಾರು ಭಕ್ತರು ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ಗುರುವಾಯನಕೆರೆ ಶ್ರೀ.ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ಯಶವಂತ್ ಹಾಗೂ ಶ್ರೀ ವೇದಮೂರ್ತಿಶ್ರೀನಿವಾಸ ಉಪಾಧ್ಯಾಯ ಬೋರ್ಕಟ್ಟೆಯವರನ್ನು ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.