ಬಳಂಜ ಮೂಲ್ಯರ ಯಾನೆ ಕುಲಾಲರ ಸಂಘದ ಉದ್ಘಾಟನೆ

ಬಳಂಜ: ನೂತನವಾಗಿ ಅಸ್ತಿತ್ವಕ್ಕೆ ಬಂದ ಬಳಂಜ, ನಾಲ್ಕೂರು, ತೆಂಕಕಾರಂದೂರು ಗ್ರಾಮದ ಮೂಲ್ಯರ ಯಾನೆ ಕುಲಾಲರ ಸಂಘದ ಉದ್ಘಾಟನೆ ಮಾ.8 ರಂದು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನೆರವೇರಿತು.
ನೂತನ ಸಂಘವನ್ನು ಉದ್ಘಾಟಿಸಿದ ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ಸಂಘಟನೆಯ ಧ್ಯೇಯ ಉದ್ದೇಶ ಸಮರ್ಪಕವಾಗಿ ಈಡೇರಲಿ ಎಂದು ಹಾರೈಸಿದರು.  ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಿರ್ಲಾಲು ಮೂಲ್ಯರ ಯಾನೆ ಕುಲಾಲರ ಸಂಘದ ಪ್ರಮುಖರಾದ ಮಾಧವ ಕುಲಾಲ್ ಸಂಘದ ಚಟುವಟಿಕೆಗಳ ಬಗ್ಗೆ ವಿವರಿಸಿದರು.
ವೇದಿಕೆಯಲ್ಲಿ ಬಳಂಜ ನಾಲ್ಕೂರು ತೆಂಕಕಾರಂದೂರು ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷರಾದ ಡೀಕಯ್ಯ ಕುಲಾಲ್ ಕಟ್ಟದಬೈಲು ಬಳಂಜ ಗ್ರಾಮ ಪಂಚಾಯತ್ ಸದಸ್ಯೆ ಶೋಭಾ ಕುಲಾಲ್, ಅಳದಂಗಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕಿ ಗುಲಾಬಿ ಎಮ್.ಎನ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಹಿರಿಯರಾದ ಉಮೇಶ್ ಕೊಡಂಗೆ ವಹಿಸಿದ್ದರು.ಉಪನ್ಯಾಸಕ ದಿನೇಶ್ ಬಿ.ಕೆ ಕಾರ್‍ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಅಶೋಕ್ ಕುಲಾಲ್ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.