ಅಪರಿಚಿತ ಆತ್ಮಹತ್ಯೆ: ವಾರಸುದಾರರ ಪತ್ತೆಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ನಗರದ ಚೌಕದಬೆಟ್ಟು ಎಂಬಲ್ಲಿ ಬಾಡಿಗೆ ಮನೆಯೊಂದಲ್ಲಿ ವ್ಯಾಸ್ತವ್ಯವಿದ್ದ ಮುಖೇಶ್ ಎಂಬವರು ಮಾ.5 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇವರು ಕೆಲಸ ಮಾಡುತ್ತಿದ್ದ ವೇಳೆ ಹುಬ್ಬಳ್ಳಿ ಕಡೆಯವನೆಂದು ಹೇಳಿಕೊಂಡಿರುವುದಾಗಿ ತಿಳಿಸಲಾಗಿದ್ದರೂ ಈ ತನಕ ಇವರ ವಾರಸುದಾರರು ಪತ್ತೆಯಾಗಿಲ್ಲ. ಮೃತದೇಹ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಶೀತಲಿಕರಣ ಘಟಕದಲ್ಲಿದ್ದು, ವಾರಸುದಾರರು ಇದ್ದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.