ಕೊರೋನಾ ನಿಯಂತ್ರಣ‌ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಶಾಸಕರ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸರ್ವೇಕ್ಷಣಾ ಘಟಕ ದ.ಕ ಜಿಲ್ಲೆ ಮಂಗಳೂರು ಇದರ ವತಿಯಿಂದ ಈಗಾಗಲೇ ಬೆಳ್ತಂಗಡಿ ಯಲ್ಲಿ ಕೊರೋನಾ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಪರಿಶೀಲನೆಗಾಗಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮಾ.14 ರಂದು  ತಾಲೂಕು ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ತಹಶಿಲ್ದಾರ ಗಣಪತಿ ಶಾಸ್ರ್ತಿ, ನ.ಪಂ‌ ಮುಖ್ಯಾಧಿಕಾರಿ ಸುಧಾಕರ್, ತಾಲೂಕು ಸಮುದಾಯ ಆರೋಗ್ಯ ಕೇಂದ್ರ ಮುಖ್ಯ ವೈದ್ಯಾಧಿಕಾರಿ ಡಾ. ವಿದ್ಯಾವತಿ, ತಾ.ಪಂ‌ ಕಾರ್ಯನಿರ್ವಹಣಾಧಿಕಾರಿ ಜೆ.ಇ ಜಯರಾಮ್ ಉಪಸ್ಥಿತರಿದ್ದರು.

 

ಬಳಿಕ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಶಾಸಕರು, ಕೊರೋನ ಬಗ್ಗೆ ಜನಜಾಗೃತಿ ಮೂಡಿಸುವಲ್ಲಿ ಯೋಜನೆ ತಯಾರಾಗಿದೆ. ಆಶಾ ಕಾರ್ಯಕರ್ತೆಯರ ಮೂಲಕ ಮನೆಮನೆಗೆ ಕರಪತ್ರ ವಿತರಣೆಗೆ ಕ್ರಮ ಕೈಗೊಂಡಿದ್ದೇವೆ.

“ಈ ಕೊರೋನಾ ವೈರಸ್ ಹೋಗಲಾಡಿಸಲು ಸೈನಿಕರ ರೀತಿಯಲ್ಲಿ ಕಾರ್ಯನಿರ್ವಹಿಸಿದರೆ ಈ ಮಹಾಮಾರಿಯನ್ನು ನಿಯಂತ್ರಿಸಲು ಸಾಧ್ಯವಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸಕ್ಕೆ ತಹಶೀಲ್ದಾರ್ ಆದಿಯಾಗಿ ತಾಲೂಕು ಆಡಳಿತದಿಂದ ಪೂರ್ಣ ಸಹಕಾರ ನೀಡಲಾಗುವುದು. ವಿದೇಶದಿಂದ ಯಾರಾದರೂ ಬಂದಿದ್ದರೆ ಅವರನ್ನು ಹೆಚ್ಚು ಗಮನಿಸುತ್ತಿರಬೇಕು ಯಾಕೆಂದರೆ ಇನ್ನಷ್ಟು ಹೆಚ್ಚು ಜನರಿಗೆ ಈ ವೈರಸ್ ನಿಂದ ಆಗುವ ತೊಂದರೆ ತಪ್ಪಿಸಲು ಈ ಕ್ರಮ ಅನಿವಾರ್ಯ ವಾಗಿದೆ”  :- ಶಾಸಕ ಹರೀಶ್ ಪೂಂಜ

 

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.