ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಹೈ ಅಲರ್ಟ್

ತಾಲೂಕಿನಲ್ಲಿ ಇದುವರೆಗೆ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಮೆಕ್ಕಾ ಯಾತ್ರೆ ಮುಗಿಸಿ ಬಂದಿದ್ದ ವ್ಯಕ್ತಿಯೊಬ್ಬರಿಗೆ ಶೀತ, ಕೆಮ್ಮು ಕಾಣಿಸಿಕೊಂಡಿದ್ದು ಅವರನ್ನು ಪರೀಕ್ಷೆಗೊಳಪಡಿಸಿದಾಗ ನೆಗೆಟಿವ್ ರಿಪೋರ್ಟ್ ಬಂದಿದೆ. ಪ್ರತಿದಿನ ಸಂಜೆ ೪ ಗಂಟೆ ವೇಳೆಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಖಾಸಗಿ ಆಸ್ಪತ್ರೆಗಳಿಂದ ನಮ್ಮ ಕಚೇರಿಗೆ ವರದಿ ತರಿಸಿಕೊಳ್ಳಲಾಗುತ್ತಿದೆ.

ವಿದೇಶದಿಂದ ಮತ್ತು ಬೇರೆ ರಾಜ್ಯಗಳಿಂದ ಊರಿಗೆ ಮರಳಿದವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಅವರ ಬಗ್ಗೆ ನಿಗಾ ಇಡಲಾಗಿದೆ. ಬೀದಿನಾಟಕ, ಕರಪತ್ರ ವಿತರಣೆ ಮೂಲಕ ಜಾಗೃತಿ, ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆ ಭೇಟಿ, ತಾಲೂಕು ಆಸ್ಪತ್ರೆಯಲ್ಲಿ ಹೆಲ್ಪ್‌ಡೆಸ್ಕ್ ವ್ಯವಸ್ಥೆ ಮಾಡಲಾಗಿದೆ. ಶಾಸಕರು ಮುತುವರ್ಜಿ ವಹಿಸಿ ಈಗಾಗಲೇ ಖಾಸಗಿಯವರಿಂದ ಪ್ರತ್ಯೇಕ ಆಂಬುಲೆನ್ಸ್ ವ್ಯವಸ್ಥೆ ಮಾಡಿಸಿದ್ದಾರೆ.

ಒಟ್ಟಾರೆಯಾಗಿ ಆರೋಗ್ಯ ಇಲಾಖೆ ಹೈಅಲರ್ಟ್ ನಿಂದಿದ್ದು ರೋಗ ನಿಯಂತ್ರಣಕ್ಕೆ, ಮಾಹಿತಿ ನೀಡುವುದಕ್ಕೆ ಸನ್ನದ್ಧವಾಗಿದೆ. ಮಾಧ್ಯಮಗಳಲ್ಲಾಗಲೀ, ಸಾಮಾಜಿಕ ಜಾಲ ತಾಣಗಳಲ್ಲಾಗಲೀ ಶಂಕಿತ ಪ್ರಕರಣದ ರೋಗಿಗಳ ಹೆಸರು ಬಳಸುವಂತಿಲ್ಲ ಮತ್ತು ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸದಂತೆ ಜಿಲ್ಲಾಧಿಕಾರಿಗಳು ನಿರ್ಬಂಧ ಹೇರಿದ್ದಾರೆ. –ಡಾ. ಕಲಾಮಧು ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಬೆಳ್ತಂಗಡಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.