ಜಿಲ್ಲೆಯಲ್ಲಿ‌ ಸೋಂಕಿತರ ಸಂಖ್ಯೆ ಏಳಕ್ಕೆ ಇನ್ನೂ ಅಪಾಯದಲ್ಲಿ ದ.ಕ ಜಿಲ್ಲೆ

ಬೆಳ್ತಂಗಡಿ: ವಿದೇಶದಿಂದ ಆಗಮಿಸಿದ್ದ ಬೆಳ್ತಂಗಡಿ ತಾಲೂಕಿನ‌ ಕರಾಯ ಕಾಲನಿ‌ ನಿವಾಸಿ, ವಿದೇಶದಿಂದ‌ ಮರಳಿದ ವ್ಯಕ್ತಿಗೆ ಕೊರೋನ ಸೋಂಕು ತಗುಲಿರುವುದು ಶುಕ್ರವಾರ ದೃಢವಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ ಏಳಕ್ಕೇರಿದೆ.

ಬೆಳ್ತಂಗಡಿ ತಾಲೂಕಿನ‌ ಮಟ್ಟಿಗೆ ಇದು ಪ್ರಥಮ‌ ಪ್ರಕರಣವಾಗಿಯೂ ದಾಖಲಾಗಿದೆ.

ಈ ಹಿಂದೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ವಿದೇಶದಿಂದ ಬಂದಿದ್ದ ಭಟ್ಕಳ ಮೂಲದ ವ್ಯಕ್ತಿಯೊಬ್ಬರಲ್ಲಿ ಕೊರೋನ ಸೋಂಕು ಪತ್ತೆಯಾಗಿತ್ತು. ಬಳಿಕ ಕಾಸರಗೋಡಿನ ವೃದ್ಧೆಯ ಸಹಿತ ನಾಲ್ವರಿಗೆ ಸೋಂಕು ತಗುಲಿತ್ತು. ಶುಕ್ರವಾರ ಬಂಟ್ವಾಳ ತಾಲೂಕಿನ ಸಜಿಪದ 10 ತಿಂಗಳ ಮಗುವಿನಲ್ಲೂ ಈ ಸೋಂಕು ದೃಢಗೊಂಡಿರುವುದು ಬೆಳಕಿಗೆ ಬಂದಿತ್ತು.

ಇದೀಗ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21ರ ಹರೆಯದ ವ್ಯಕ್ತಿಗೆ ಕೊರೋನ ಸೋಂಕು ತಗುಲಿರುವುದು ಸ್ಪಷ್ಟಗೊಂಡಿದೆ.

ದುಬೈಯಲ್ಲಿದ್ದ ಇವರು ಮಾ.21ರಂದು ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ‌ ಭಾರತಕ್ಕೆ ತಲುಪಿದ್ದರು. ಅಲ್ಲಿಂದ ಕೆಎಸ್ಸಾರ್ಟಿಸಿ ಬಸ್ ಮೂಲಕ ಊರಿಗೆ ಬಂದಿದ್ದರು. ಆ ಬಳಿಕ ಜ್ವರ ಮತ್ತು ಕೆಮ್ಮುವಿನಿಂದ ಬಳಲುತ್ತಿದ್ದುದರಿಂದ ಮಾ.24ರಂದು ಅವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಂದೇ ಅವರ ಗಂಟಲಿನ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ವರದಿಯಲ್ಲಿ ಕೊರೋನ ಸೋಂಕು ತಗುಲಿರುವುದು ದೃಢಗೊಂಡಿದೆ.
ರೋಗಿಯ ಆರೋಗ್ಯ ಸಧ್ಯ ಸ್ಥಿರವಾಗಿದೆ‌ ಎಂದು ಜಿಲ್ಲಾ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅವರ ತಂದೆ ಸಹಿತ ಹತ್ತಿರದ ಸಂಬಂಧಿಗಳನ್ನು ತೀವ್ರ ನಿಗಾವಣೆಯಲ್ಲಿಡಲಾಗಿದೆ. ಅಲ್ಲದೆ ಅವರು ಇಷ್ಡೂ ದಿನಗಳಲ್ಲಿ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.