HomePage_Banner_
HomePage_Banner_
HomePage_Banner_

1ರಿಂದ 8 ತರಗತಿಯ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್: ಶಿಕ್ಷಣ ಸಚಿವ ಸುರೇಶ್ ಕುಮಾರ್ * 9ನೇ ತರಗತಿಗೆ ಆಂತರಿಕ ಪರೀಕ್ಷೆಯ ಅಂಕಗಳ ಪರಿಗಣನೆ

Advt_NewsUnder_1

ಬೆಂಗಳೂರು: ಕೊರೊನಾ ವೈರಸ್ ಹರಡುವ ಭೀತಿಯಿಂದ 1ನೇ ತರಗತಿಯಿಂದ 8ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆಗಳಿಲ್ಲದೇ ಪಾಸ್ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಅವರು ಎ.2ರಂದು ತಮ್ಮ ಫೇಸ್‍ಬುಕ್ ಲೈವ್‍ನಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಇರುವ ಗೊಂದಲಗಳ ಬಗ್ಗೆ ಉತ್ತರಿಸಿದ ಅವರು ಈ ಹಿಂದೆ 1ರಿಂದ 6ನೇ ತರಗತಿಯ ವಿದ್ಯಾರ್ಥಿಗಳಿಗೆ ಯಾವ ಪರೀಕ್ಷೆ ಇಲ್ಲದೆ ಉತ್ತೀರ್ಣಗೊಳಿಸಲು ಆದೇಶಿಸಲಾಗಿತ್ತು. ಈಗ 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ಪಾಸು ಮಾಡಲು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ ಎಂದರು. ಇದರಿಂದ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಉತ್ಸಾಹದಲ್ಲಿದ್ದ ಸರಕಾರಕ್ಕೆ ಕೊರೊನಾ ವೈರಸ್‍ನಿಂದಾಗಿ ಹಿನ್ನೆಡೆ ಉಂಟಾಗಿದೆ.

ಏಳನೇ ತರಗತಿಗೆ ಕೊರೊನಾ ಹಿನ್ನೆಲೆಯಲ್ಲಿ ಈಗ ಮೌಲ್ಯಂಕನಾ ಪರೀಕ್ಷೆ ಮಾಡಲು ಸಾಧ್ಯವಿಲ್ಲ. ಅದನ್ನು ಎಂಟನೇ ತರಗತಿಯ ಪ್ರಾರಂಭದ ಅವಧಿಯಲ್ಲಿ ಈ ಪರೀಕ್ಷೆ ನಡೆಸಲಾಗುವುದು ಎಂದರು.
9ನೇ ತರಗತಿಗೆ ಆಂತರಿಕ ಪರೀಕ್ಷೆ ಪರಿಗಣನೆ:
ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ಫಾರ್ಮೆಟಿವ್(ರೂಪಣಾತ್ಮಕ), ಸಮ್ಮೇಟಿವ್(ಸಂಕಲನಾತ್ಮಕ) ಎಂಬ ಎರಡು ಆಂತರಿಕ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅದರ ಆಧಾರದ ಮೇಲೆ 10ನೇ ತರಗತಿಗೆ ಪಾಸ್ ಮಾಡಲಾಗುವುದು. ಈ ಎರಡು ಪರೀಕ್ಷೆಗಳಲ್ಲಿ ಅನುತ್ತೀರ್ಣರಾದವರಿಗೆ ಈ ರಜಾ ಅವಧಿಯಲ್ಲಿ ಸೂಕ್ತ ಮಾರ್ಗದರ್ಶನ, ಅಧ್ಯಯನ ನಡೆಸಿ ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಪರೀಕ್ಷೆ ನಡೆಸಿ ಉತ್ತೀರ್ಣಗೊಳಿಸಲಾಗುವುದು.
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬಗ್ಗೆ ಪರಿಸ್ಥಿತಿ ಅವಲೋಕಿಸಿಕೊಂಡು ಎ.14ರ ನಂತರ ತೀರ್ಮಾನಿಸಿ ವಿದ್ಯಾರ್ಥಿಗಳಿಗೆ ಕಲಿಯುವಿಕೆಗೆ ಸಾಕಷ್ಟು ಸಮಯ ನಿಗದಿಪಡಿಸಿ ವೇಳಾಪಟ್ಟಿ ಪ್ರಕಟಿಸಲಾಗುವುದು. ಇನ್ನು ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಕೂಡ ಎ.14ರ ನಂತರ ತಿಳಿಸಲಾಗುವುದು ಎಂದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.