ಪಡಿತರ ಗ್ರಾಹಕರು ಸಾಮಾಜಿಕ ಅಂತರ ಕಾಯಲು ಆಸನ ವ್ಯವಸ್ಥೆ ನ್ಯಾಯಬೆಲೆ ಅಂಗಡಿಗಳಲ್ಲಿ ಸ್ಯಾನಿಟೈಸರ್, ನೀರಿನ ಬಳಕೆ

ಬೆಳ್ತಂಗಡಿ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್‍ನಿಂದಾಗಿ ಸರಕಾರವು ಎರಡು ತಿಂಗಳಿನ ಪಡಿತರವನ್ನು ಒಟ್ಟಿಗೆ ವಿತರಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಆಹಾರ ಇಲಾಖೆಯು ಮುಂಜಾಗ್ರತವಾಗಿ ತಾಲೂಕಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. 

ಪಡಿತರ ವಿತರಣಾ ಕೇಂದ್ರವಾದ ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡುದಾರರು ಪಡಿತರ ಖರೀದಿಗೆ ಸರದಿ ಸಾಲಿನಲ್ಲಿ ನಿಲ್ಲುವಾಗ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಪಡಿತರ ಅಂಗಡಿಗಳಲ್ಲಿ ಸ್ವಚ್ಛತೆಗಾಗಿ ನೀರು, ಸೋಪಿನ ವ್ಯವಸ್ಥೆಯನ್ನು ಮಾಡಲಾಗಿದೆ.


ಪಡಿತರ ಗ್ರಾಹಕರಿಗೆ ಆಸನ ವ್ಯವಸ್ಥೆ:
ಜಿಲ್ಲೆಯಲ್ಲಿ ಪಡಿತರ ವಿತರಣೆಯನ್ನು ಎ.2ರಿಂದ ಆರಂಭಿಸಿದ್ದು, ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಾಡಲು ಬಂಗಾಡಿ ಸಿ.ಎ. ಬ್ಯಾಂಕಿನ ಕಡಿರುದ್ಯಾವರ ಶಾಖೆಯಲ್ಲಿ ಪಡಿತರ ಪಡೆಯಲು ಟೋಕನ್ ವ್ಯವಸ್ಥೆ ಮಾಡಲಾಗಿದೆ. ಅದಲ್ಲದೇ ಗ್ರಾಹಕರು ಮಾಸ್ಕ್‍ಗಳನ್ನು ಧರಿಸಿ ಅಂತರ ಕಾಯ್ದುಕೊಂಡಿದ್ದರು ಹಾಗೂ ತೊಂದರೆ ಆಗದಿರಲು ಆಸನ ವ್ಯವಸ್ಥೆ ಒದಗಿಸಲಾಗಿದೆ.

ದಿನಕ್ಕೆ 200 ಮಂದಿಗೆ ಪಡಿತರ :
ಪಡಿತರ ವಿತರಣೆಯಲ್ಲಿ ಸಾಮಾಜಿಕ ಅಂತರ ಕಾಯಲು ಶ್ರೀ ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕಿನ ಸಭಾಭವನದಲ್ಲಿ ದಿನಕ್ಕೆ 200 ಜನರಿಗೆ ಪಡಿತರ ಚೀಟಿದಾರರಿಗೆ ವಿತರಿಸುವ ವ್ಯವಸ್ಥೆ ಮಾಡಲಾಗಿದೆ. ಪಡಿತರ ಖರೀದಿಗೆ ಬಂದ ಗ್ರಾಹಕರು ಮಾಸ್ಕ್‍ಗಳನ್ನು ಧರಿಸಿದ್ದರು. ವಿತರಣೆ ಜವಾಬ್ದಾರಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಹರಿದಾಸ್ ಗಾಂಭೀರ, ಮ್ಯಾನೇಜರ್ ರವೀಂದ್ರ ಮತ್ತು ಆಡಳಿತ ಮಂಡಳಿಯ ನಿರ್ದೇಶಕರ ಉಸ್ತುವಾರಿಯಲ್ಲಿ ಗ್ರಾಹಕರಿಗೆ ಆಸನ ವ್ಯವಸ್ಥೆ, ಸ್ಯಾನಿಟೈಸರ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.