ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಿಂದ ಪಡಿತರ ವಿತರಣೆಗೆ ಸೂಕ್ತ ವ್ಯವಸ್ಥೆ

ಬಂಗಾಡಿ: ಕೊರೊನಾ ವೈರಸ್ ಹರಡದಂತೆ ತಡೆಯಲು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಎಲ್ಲ ಶಾಖೆಗಳಲ್ಲಿ ಪಡಿತರ ವಿತರಣೆ ಸಂದರ್ಭದಲ್ಲಿ ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಡಳಿತ ಮಂಡಳಿಯಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ. 

ಪಡಿತರಕ್ಕೆ ಬರುವ ಗ್ರಾಹಕರಿಗೆ ಬಿಸಿಲಿನಿಂದ ತೊಂದರೆಯಾಗದಂತೆ ಶಾಮಿಯಾನ ಹಾಕಿರುವಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಡುದಾರರು ಮಾಸ್ಕ್ ಗಳನ್ನು ಧರಿಸಿ ಸರದಿ ಪ್ರಕಾರ ಸಾಲಿನಲ್ಲಿ ಬಂದು ಪಡಿತರ ಪಡೆಯುವವರಿಗೆ ಕೈಗಳನ್ನು ಸ್ವಚ್ಛಗೊಳಿಸಲು ನೀರು, ಸೋಪು ಒದಗಿಸಲಾಗಿದೆ. ಅಲ್ಲದೇ ಪಡಿತರದಾರರಿಗೆ ಕುಡಿಯಲು ನೀರು ಹಾಗೂ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ವ್ಯವಸ್ಥೆ ಮಾಡಿದ್ದಾರೆ.

ಅಧ್ಯಕ್ಷರಾದ ಹರೀಶ್ ಸಾಲ್ಯಾನ್ ಮೊರ್ತಾಜೆ ಅವರು ಪಡಿತರಕ್ಕೆ ಬರುವವರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.